ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇಗುಲದಲ್ಲಿ ಧನುಪೂಜೆ ಆರಂಭ

0

ಸುಳ್ಯಸೀಮೆ ಮಹತೋಭಾರ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಧನುಪೂಜೆಯು ಡಿ.16ರಂದು ಪ್ರಾತ:ಕಾಲ ನಡೆಯಿತು.

ಪ್ರಾತ:ಕಾಲ 5 ಗಂಟೆಗೆ ದೇವಸ್ಥಾನದ ಪ್ರಧಾನ ಅರ್ಚಕ ಕೇಶವಮೂರ್ತಿ ಭಟ್ ಅವರ ನೇತೃತ್ವದಲ್ಲಿ ಪೂಜಾ ವಿಧಿ-ವಿಧಾನಗಳು ನಡೆಯಿತು.

ಧನುಪೂಜೆಗೂ ಮುಂಚಿತವಾಗಿ ಸುಳ್ಯದ ಕಾಯರ್ತೋಡಿ ಶ್ರೀ ಮಹಾವಿಷ್ಣು ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಸೇವೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ.ಬಿ. ದಿವಾಕರ ರೈ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅವಿನ್ ರಂಗತ್ ಮಲೆ, ಮಾಜಿ ವ್ಯವಸ್ಥಾಪನ ಸಮಿತಿ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಧನುಪೂಜೆಯು ಜ.14ರ ಮಕರ ಸಂಕ್ರಮಣದ ತನಕ ಪ್ರತಿದಿನ ಪ್ರಾತ:ಕಾಲ 5ಕ್ಕೆ ನಡೆಯಲಿದೆ.