ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲೆಗೆ ಪ್ರಶಸ್ತಿ

0

ಬೆಳ್ತಂಗಡಿ ತಾಲೂಕಿನ ಹೋಲಿ ರಿಡೀಮರ್ ವಿದ್ಯಾ ಸಂಸ್ಥೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಯಲ್ಲಿ ಪ್ರೌಢಶಾಲಾ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಅಭಿರಾಮ್ ಬಿ ಹಾಗೂ ರಕ್ಷಾ ಎಂ ಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ವಿಭಾಗದ ಮಿಮಿಕ್ರಿ ಸ್ಪರ್ಧೆಯಲ್ಲಿ ಏಳನೇ ತರಗತಿಯ ಅಶ್ವಿಜ್ ಜಿ ಆರ್ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಏಳನೇ ತರಗತಿಯ ಹಿಷಾ ಹರ್ಷ ಇಂಗ್ಲೀಷ್ ಕಂಠ ಪಾಠ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಶಿಕ್ಷಕಿಯರಾದ ಶ್ರೀಮತಿ ಅನಿತಾ, ಶ್ರೀಮತಿ ಶೋಭಾ, ಶ್ರೀಮತಿ ಹೇಮಾವತಿ, ಶ್ರೀಮತಿ ಗೀತಾ ಲಕ್ಷ್ಮಿ ಸಹಕರಿಸಿದರು.
ಶಾಲಾ ಸಂಚಾಲಕರಾದ ವಂದನೀಯ ಫಾದರ್ ವಿಕ್ಟರ್ ಡಿಸೋಜಾ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಮೇರಿ ಸ್ಟೆಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.