ಕೊಡಗು ಸಂಪಾಜೆ: ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆ

0

ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ಚುನಾವಣೆಯ ಹಿನ್ನೆಲೆಯಲ್ಲಿ ಡಿ.17ರಂದು ಕಾಂಗ್ರೆಸ್ ಬೆಂಬಲಿತ ಎಂಟು ಮಂದಿ ಅಭ್ಯರ್ಥಿಗಳು ಹಾಗೂ ಓರ್ವ ಸ್ವತಂತ್ರ ಅಭ್ಯರ್ಥಿ ಸೇರಿದಂತೆ ಒಟ್ಟು ಒಂಭತ್ತು ನಾಮಪತ್ರಗಳು ಸಲ್ಲಿಕೆಗೊಂಡಿವೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಸ್ಥಾನದಿಂದ ಆದಂಕುಂಞಿ ಹೆಚ್.ಎ., ಗಣಪತಿ ಬಲ್ಯಮನೆ, ತಿರುಮಲ ಸೋನ ಎಸ್.ಎನ್., ,ಹಿಂದುಳಿದ ವರ್ಗ ಪ್ರವರ್ಗ ಎ ಕ್ಷೇತ್ರದಿಂದ ಗೋಪಾಲ ಪೂಜಾರಿ ಎಸ್. ಸಂಪಾಜೆ, ಹಿಂದುಳಿದ ವರ್ಗ ಪ್ರವರ್ಗ ಬಿ ಕ್ಷೇತ್ರದಿಂದ ಮೋಹನ ಕೆ.ಆರ್., ಸಾಮಾನ್ಯ ಮಹಿಳಾ ಕ್ಷೇತ್ರದಿಂದ ರೇಖಾ ಹೆಚ್.ಎ., ಪರಿಶಿಷ್ಟ ಜಾತಿ ಕ್ಷೇತ್ರದಿಂದ ಬಾಬು ಹೆಚ್. ಎಂ., ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಸತೀಶ್ ಪಿ.ಆರ್. ಅವರು ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ಪುರುಷೋತ್ತಮ ಬಾಳೆಹಿತ್ಲು ಅವರು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.