ಆಲೆಟ್ಟಿ ಗ್ರಾಮದ ನಾಗಪಟ್ಟಣ ನಿವಾಸಿ ಮಂಗಳೂರಿನ ಊರ್ವ ಪೋಲಿಸ್ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಯರಾಮ ರವರು ಅಲ್ಪ ಕಾಲದ ಅಸೌಖ್ಯದಿಂದ
ಡಿ.17 ರಂದು ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 53 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮೃತರು ರಾಜ್ಯ ಮಟ್ಟದ ವಾಲಿಬಾಲ್ ಮತ್ತು ಕಬಡ್ಡಿ ಆಟಗಾರರಾಗಿ ಗುರುತಿಸಿಕೊಂಡಿದ್ದರು. ಮೃತರ ಪಾರ್ಥಿವ ಶರೀರವನ್ನು ಇಂದು ಹಳೆ ಗೇಟಿನ ಜಯನಗರ ದಲ್ಲಿರುವ ಮನೆಗೆ ಕರೆತಂದು ಅಂತಿಮ ದರ್ಶನಕ್ಕೆ ಮಧ್ಯಾಹ್ನ 2 ಗಂಟೆಯಿಂದ 4 ರ ತನಕ ಇಡಲಾಗುವುದು ಎಂದು ತಿಳಿದು ಬಂದಿದೆ.