ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಮತ್ತು ಸುಳ್ಯ ರೋಟರಿ ಕ್ಲಬ್ ವತಿಯಿಂದ ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್ ಬಗ್ಗೆ ಮಾಹಿತಿ ಕಾರ್ಯಕ್ರಮವು ಡಿ.17 ರಂದು ಬೆಳ್ಳಾರೆಯ ದೇವಿ ಹೈಟ್ಸ್ ನಲ್ಲಿ ನಡೆಯಿತು.
ಸಂಜೀವಿನಿ ಒಕ್ಕೂಟ ಬೆಳ್ಳಾರೆ, ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ, ಒಡಿಯೂರು ಗ್ರಾಮ ವಿಕಾಸ ಯೋಜನೆ ಬೆಳ್ಳಾರೆ ಇವರ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
ಬೆಳ್ಳಾರೆ ರೋಟರಿ ಕ್ಲಬ್ ಅಧ್ಯಕ್ಷ
ಚಂದ್ರಶೇಖರ ರೈ ಬಜನಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಸ್ತ್ರೀರೋಗ ತಜ್ಞೆ ಡಾ.ವೀಣಾ ಎನ್,ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷೆ ಶ್ರೀಮತಿ ಗೀತಾ ಗೋಪಿನಾಥ್ , ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ನಿಶ್ಮಿತಾ,ಸ್ನೇಹಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಪೂರ್ಣಿಮ ಪಡ್ಪು, ಒಡಿಯೂರು ಸಂಘದ ಅಧ್ಯಕ್ಷ ಲೋಕೇಶ್, ಲಕ್ಷ್ಮೀ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ನಳಿನಿ , ಸುಳ್ಯ ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ಉಷಾ ಪ್ರಸಾದ್ ರೈ ಉಪಸ್ಥಿತರಿದ್ದರು.
ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ರೈ ಸ್ವಾಗತಿಸಿ,ರೊ.ಪ್ರಭಾಕರ ಆಳ್ವ ಕಾರ್ಯಕ್ರಮ ನಿರೂಪಿಸಿ,ಕಾರ್ಯದರ್ಶಿ ರೊ.ಎ.ಕೆ.ಮಣಿಯಾಣಿ ವಂದಿಸಿದರು.
ಸಭಾ ಕಾರ್ಯಕ್ರಮ ನಡೆದ ಬಳಿಕ
ಸ್ತ್ರೀರೋಗ ತಜ್ಞೆ ಡಾ.ವೀಣಾ ಎನ್.ರವರು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ನೂರಾರು ಜನ ಮಹಿಳೆಯರು ಉಪಸ್ಥಿತರಿದ್ದರು.