ಅಪೂರ್ವ ದೋಳ್ಪಾಡಿಯವರಿಗೆ ರಾಷ್ಟ್ರೀಯ ಮಟ್ಟದ ಸ್ಮಾರ್ಟ್ ಇಂಡಿಯಾ ಹ್ಯಾಕತಾನ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ

0

ಭಾರತ ಸರಕಾರದ ಶಿಕ್ಷಣ ಸಚಿವಾಲಯದ ವತಿಯಿಂದ ಹರಿಯಾಣದಲ್ಲಿ ಇತ್ತೀಚಿಗೆ ನಡೆದ ರಾಷ್ಟ್ರೀಯ ಮಟ್ಟದ ಸ್ಮಾರ್ಟ್ ಇಂಡಿಯನ್ ಹ್ಯಾಕತಾನ್ – 2024 ಸ್ಪರ್ಧೆಯಲ್ಲಿ ಅಪೂರ್ವ ದೋಳ್ಪಾಡಿ ಮತ್ತು ತಂಡ ಪ್ರಥಮ ಸ್ಥಾನ ಪಡೆದು ಒಂದು ಲಕ್ಷ ನಗದು ಬಹುಮಾನ ಪಡೆದಿದ್ದಾರೆ.

ಬೆಂಗಳೂರಿನ ಬಿಎಂಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಈಕೆ ಉಜಿರೆಯ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಧ್ಯಾಪಕ ಯಶವಂತ ದೋಳ್ಪಾಡಿ
ಮತ್ತು ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕಿ ಡಾ. ಸುರೇಖಾ ಮೋoಟಡ್ಕ ದಂಪತಿಯ ಪುತ್ರಿ.