ಆರಿಕೋಡಿ ಚಾಮುಂಡೇಶ್ವರಿ ಧರ್ಮದರ್ಶಿ ಹರೀಶ್ ರಿಗೆ ಚೆನ್ನಕೇಶವ ದೇವಸ್ಥಾನದ ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮದ ಆಮಂತ್ರಣ ಪತ್ರ ನೀಡಿದ ಅಕ್ಷಯ್ ಕೆ.ಸಿ.

0

ಆರಿಕೋಡಿ ಚಾಮುಂಡೇಶ್ವರಿ ಧರ್ಮದರ್ಶಿ ಹರೀಶ್ ರಿಗೆ ಚೆನ್ನಕೇಶವ ದೇವಸ್ಥಾನದ ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮದ ಆಮಂತ್ರಣವನ್ನು ಡಿ. 18ರಂದು ಎಒಎಲ್ಇ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿಯವರು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿ ಆಶೀರ್ವಾದ ಪಡೆದುಕೊಂಡರು.


ಸುಳ್ಯ ತಾಲೂಕಿನ ಇತಿಹಾಸ ಪ್ರಸಿದ್ಧ ಭಕ್ತಿ ಕೇಂದ್ರವಾಗಿರುವ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಡಾ. ಕೆ.ವಿ ಚಿದಾನಂದ ಮತ್ತು ಮನೆಯವರು ನೂತನ ಬ್ರಹ್ಮರಥ ಮತ್ತು ಪಲ್ಲಕ್ಕಿಯನ್ನು ಸಮರ್ಪಿಸಲಿದ್ದಾರೆ. ಡಿ.25ರಂದು ಸುಳ್ಯದಲ್ಲಿ ರಥ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನೂತನ ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಗಣ್ಯರಿಗೆ ಕೊಡುವ ಕಾರ್ಯ ನಡೆಯುತ್ತಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಸುಳ್ಯ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ರಥೋತ್ಸವ ಸಮಿತಿಯ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.