ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರ

0

ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಜಿಲ್ಲಾ ಅಂಧತ್ವ ನಿಯಂತ್ರಣ ಸೊಸೈಟಿ (ರಿ.) ಮಂಗಳೂರು, ಸಮುದಾಯ ಆರೋಗ್ಯ ಕೇಂದ್ರ, ಮಂಡೆಕೋಲು ಗ್ರಾಮ ಪಂಚಾಯತ್, ಮಂಡೆಕೋಲು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರ ಡಿ. 18 ರಂದು ಮಂಡೆಕೋಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಕೆ. ಉದ್ದಂತಡ್ಕ ನೆರವೇರಿಸಿದರು.

ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಣ್ಣಿನ ವಿಭಾಗದ ಪ್ರೊಫೆಸರ್ ಡಾ. ಮಹೇಶ್ ಬಾಬು, ಮಂಡೆಕೋಲು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಪ್ರತಿಮಾ ಹೆಬ್ಬಾರ್, ಮಂಡೆಕೋಲು ಪಂಚಾಯತ್ ಅಭಿವೃದ್ದಿ ಅಧಿಕಾರಿ ರಮೇಶ್ ಪಿ, ಸುಳ್ಯ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸುರೇಶ ಕಣೆಮರಡ್ಕ ಉಪಸ್ಥಿತರಿದ್ದರು.