ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇಂದ್ರಾಜೆ, ಹಿರಿಯ ವಿದ್ಯಾರ್ಥಿ ಸಂಘ ಇಂದ್ರಾಜೆ ವತಿಯಿಂದ
ಡಿ.28 ರಂದು ಶಾಲಾ ವಾರ್ಷಿಕೋತ್ಸವ ನಡೆಯಲಿದೆ.
ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪಾವನ ಜೋಗಿಬೆಟ್ಟು ಬೆಳಿಗ್ಗೆ ಗಂಟೆ 9.30 ಕ್ಕೆ ಧ್ವಜಾರೋಹಣ ನೆರವೇರಿಸುವರು.
ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು,ಪದಾಧಿಕಾರಿಗಳು,ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿರುವರು.
ಸಂಜೆ ಗಂಟೆ 5.30 ಕ್ಕೆ ಇಂದ್ರಾಜೆ ಅಂಗನವಾಡಿ ಕೇಂದ್ರ ಹಾಗು ಶಾಲಾ ವಿದ್ಯಾರ್ಥಿ ಗಳಿಂದ ,ಪೋಷಕರಿಂದ,ಹಿರಿಯ ವಿದ್ಯಾರ್ಥಿ ಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ರಾತ್ರಿ ಗಂಟೆ 8.00 ರಿಂದ ಸಭಾಕಾರ್ಯಕ್ರಮ ನಡೆಯಲಿದೆ.
ಶಾಸಕಿ ಭಾಗೀರಥಿ ಮುರುಳ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಶಿವರಾಮ ಕೆ.ಸಭಾಧ್ಯಕ್ಷತೆ ವಹಿಸಲಿದ್ದಾರೆ.
ವೇದಿಕೆಯಲ್ಲಿ ಹಲವು ಜನ ಗಣ್ಯರು ಉಪಸ್ಥಿತರಿರಲಿದ್ದಾರೆ.