ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ರಿ. ಮಂಗಳೂರು, ವಿಜಯ ಗ್ರಾಮ ಸಮಿತಿ ನಾಲ್ಕೂರು ಇವುಗಳ ಆಶಯದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರ ಹಾಲೆಮಜಲು ಇಲ್ಲಿ ಮಕ್ಕಳಲ್ಲಿ ಕಂಡು ಬರುವ ಕಾಲುಬಾಯಿ ಜ್ವರ ಹಾಗೂ ಅದಕ್ಕೆ ಚಿಕಿತ್ಸೆ ಮತ್ತು ಔಷಧಿ ಕಿಟ್ ವಿತರಣಾ ಕಾರ್ಯಕ್ರಮ ಇಂದು ಶಾಲಾ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಸಮಿತಿಯ ಅಧ್ಯಕ್ಷ ಡಿ.ಆರ್. ಉದಯಕುಮಾರ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಡಾ. ನಿಶಾಂತ್ ಅರ್ನೋಜಿ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮುಖಾಂತರ ಉದ್ಘಾಟಿಸಿ, ನಂತರ ಆರೋಗ್ಯ ಮಾಹಿತಿಯನ್ನು ನೀಡಿದರು.
ವೇದಿಕೆಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ಸವಿತಾ ಎಚ್. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಯಂತಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ತೇಜಕುಮಾರಿ ಉಪಸ್ಥಿತರಿದ್ದರು. ಅತಿಥಿಗಳು ಮಕ್ಕಳಿಗೆ ಪ್ರತಿಷ್ಠಾನದಿಂದ ಕೊಡಲ್ಪಡುವ ಔಷಧಿ ಕಿಟ್‌ಗಳನ್ನು ವಿತರಿಸಿದರು. ಸಭೆಯಲ್ಲಿ . ಶಾಲಾ ಗೌರವ ಶಿಕ್ಷಕಿ ಶ್ರೀಮತಿ ಲತಾಶ್ರೀ ಸೇರಿದಂತೆ ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯರು ಆಶಾ ಕಾರ್ಯಕರ್ತೆ, ಮಕ್ಕಳ ಪೋಷಕರು, ಮಕ್ಕಳು ಉಪಸಿತರಿದ್ದರು. ವಿಜಯ ಗ್ರಾಮ ಸಮಿತಿ ನಾಲ್ಕೂರು ಇದರ ಕಾರ್ಯದರ್ಶಿ ದಿನೇಶ್ ಹಾಲೆಮಜಲು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.