ಕೊಡಗು ಸಂಪಾಜೆ: ಪಯಸ್ವಿನಿ ಪ್ರಾ.ಕೃ.ಪ.ಸ.ಸಂಘದ ಆಡಳಿತ ಮಂಡಳಿ ಚುನಾವಣೆ

0

ಎನ್.ಸಿ. ಅನಂತ್ ನೇತೃತ್ವದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆಯ ಹಿನ್ನೆಲೆಯಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಎನ್.ಸಿ. ಅನಂತ್ ಊರುಬೈಲು ಅವರ ನೇತೃತ್ವದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಡಿ.19ರಂದು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಾಯಕರಾದ ಸುಬ್ರಹ್ಮಣ್ಯ ಉಪಾಧ್ಯಾಯ, ರಾಜಾರಾಮ ಕಳಗಿ, ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರಮಾದೇವಿ ಬಾಲಚಂದ್ರ ಕಳಗಿ ಸೇರಿದಂತೆ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.