ಕಾರಂತ ಬಾಲ ಪುರಸ್ಕಾರಕ್ಕೆ ಅವನಿ ಎಂ.ಎಸ್.ಆಯ್ಕೆ

0

ಕೋಟ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ, ಉಡುಪಿಯ ಡಾ.ಶಿವರಾಮ ಕಾರಂತ ಟ್ರಸ್ಟ್ ಮತ್ತು ಕೋಟತಟ್ಟು ಗ್ರಾಮ ಪಂಚಾಯಿತಿ ವತಿಯಿಂದ ಕೊಡಮಾಡುವ 4ನೇ ವರ್ಷದ ಡಾ.ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಸುಳ್ಯದ ಅವನಿ ಎಂ.ಎಸ್.ಆಯ್ಕೆಯಾಗಿದ್ದಾರೆ.

ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿಯಾದ
ಅವನಿ ಎಂ.ಎಸ್.ಸಂಗೀತ, ಡ್ಯಾನ್ಸ್, ಡ್ರಾಯಿಂಗ್, ಚೆಸ್ ಮುಂತಾದ ಕ್ಷೇತ್ರದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದು, ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಅವನಿ ಎಂ.ಎಸ್.ಶಶಿಧರ ಎಂ.ಜೆ.ಮತ್ತು ಶ್ರೀಮತಿ ರೇಷ್ಮಾ ದಂಪತಿಯ ಪುತ್ರಿ