ಬಿಜೆಪಿ ಬೆಂಬಲಿತ ಐದು ಮಂದಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತ ಐದು ಮಂದಿ ಅಭ್ಯರ್ಥಿಗಳು ಡಿ.20ರಂದು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಸಾಲಗಾರರಲ್ಲದ ಕ್ಷೇತ್ರದಿಂದ ಪ್ರಶಾಂತ್ ಕೆ.ಸಿ., ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಕಿಶೋರ್ ಕುಮಾರ್ ಉಳುವಾರು, ಸ್ವಾತಿಕ್ ಕೆ.ಎಲ್., ಮನ್ವಿತ್ ಕೆ.ಪಿ. ಹಾಗೂ ಸಾಮಾನ್ಯ ಮಹಿಳಾ ಕ್ಷೇತ್ರದಿಂದ ಶ್ರೀಮತಿ ಪುಷ್ಪಾ ಮೇದಪ್ಪ ಅವರು ನಾಮಪತ್ರ ಸಲ್ಲಿಸಿದರು. ಬಿಜೆಪಿ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.