ಬೆಂಗಳೂರಿನಲ್ಲರುವ ಈ ಹಿರಿಯ ವಿಶ್ವವಿದ್ಯಾಲಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ವಿಭಾಗದ ಅಧ್ಯಯನ ಮಂಡಳಿ (Board of Studies)ಯ ಬಾಹ್ಯ ಸದಸ್ಯ (External Member)ರಾಗಿ ಡಾ. ಪುನೀತ್ ರಾಘವೇಂದ್ರ ಕುಂಟುಕಾಡು BNYS,MD Yoga ಇವರು ಆಯ್ಕೆಯಾಗಿದ್ದಾರೆ. ಇವರು ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಪ್ರಸಿದ್ಧ ಕುಂಟುಕಾಡು ಮನೆತನದವರು. ಯೋಗ ವಿಜ್ಞಾನದಲ್ಲಿ ದೇಶ- ವಿದೇಶಗಳಲ್ಲಿ ಸಂಶೋಧನೆ ಮಾಡಿರುವ ಇವರ ಲೇಖನಗಳು ಹಲವಾರು ರಾಷ್ಟ್ರೀಯ- ಅಂತರ್ರಾಷ್ಟ್ರೀಯ ಜರ್ನಲ್‌ಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಮಂಗಳೂರಿನ ಪ್ರತಿಷ್ಠಿತ ಯೆನೆಪೋಯ ಪರಿಗಣಿತ (Deemed to be) ವಿಶ್ವವಿದ್ಯಾಲಯದ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಪ್ರೊಫೆಸರ್ ಹಾಗೂ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕರ್ನಾಟಕ ರಾಜ್ಯದಾದ್ಯಂತ ಹರಡಿರುವ ಸುಮಾರು 700ಕ್ಕಿಂತಲೂ ಅಧಿಕ ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಹೋಮಿಯೋಪತಿ, ಪ್ರಕೃತಿ ಚಿಕಿತ್ಸೆ(ನ್ಯಾಚುರೋಪತಿ) ಹಾಗೂ ಯೋಗಶಿಕ್ಷಣ, ಯುನಾನಿ, ಫಾರ್ಮಸಿ, ನರ್ಸಿಂಗ್, ಫಿಜಿಯೋಥೆರಪಿ ಹಾಗೂ ಇತರೆ ಅರೆವೈದ್ಯಕೀಯ ಮಹಾವಿದ್ಯಾಲಯಗಳಿಗೆ ಸಂಯೋಜನೆ ನೀಡಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು, ದೇಶದಲ್ಲಿಯೇ ಅತಿ ದೊಡ್ಡ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವೆಂಬ ಖ್ಯಾತಿಯನ್ನು ಹೊಂದಿದೆ. ಪ್ರಸ್ತುತ ವಿಶ್ವವಿದ್ಯಾಲಯದ ಕೆಳಗೆ 12 ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜುಗಳು ಕಾರ್ಯ ನಿರ್ವಹಿಸುತ್ತಿವೆ. ಈ ಕಾಲೇಜುಗಳಲ್ಲಿ 2000ಕ್ಕೂ ಹೆಚ್ಚು BNYS (ಬ್ಯಾಚುಲರ್ ಆಫ್ ನ್ಯಾಚುರೋಪತಿ ಆಂಡ್ ಯೋಗಿಕ್ ಸೈನ್ಸಸ್) ವಿದ್ಯಾರ್ಥಿಗಳು ಹಾಗೂ 100ಕ್ಕೂ ಹೆಚ್ಚು MD ( Yoga Clinical/ Naturopathy Clinical/ Nutrition & Dietetics) ಸ್ನಾತಕೋತ್ತರ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಇಲ್ಲಿ ಯೋಗ ಹಾಗೂ ಪ್ರಕೃತಿ ಚಿಕಿತ್ಸೆಯಲ್ಲಿ ಪಿಹೆಚ್‌ಡಿ ಅಧ್ಯಯನಗಳೂ ನಡೆಯುತ್ತಿವೆ.