ಜಾಲ್ಸೂರು ಗ್ರಾಮದ ವಿನೋಬನಗರದ ರಾಷ್ಟೋತ್ಥಾನ ಶಿಶುಮಂದಿರ, ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ವಿವೇಕಾನಂದ ಆಂಗ್ಲ ಮಾದ್ಯಮ ಪ್ರೌಢಶಾಲೆಯ ಶಾಲಾ ವಾರ್ಷಿಕ ಕ್ರೀಡಾಕೂಟ 2024-25 ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮೈದಾನದಲ್ಲಿ ಡಿ.21ರಂದು ನಡೆಯಿತು.
ಕ್ರೀಡಾಕೂಟವನ್ನು ಉದ್ಯಮಿ ಅಶೋಕ್ ಪ್ರಭು ಅವರು ಉದ್ಘಾಟಿಸಿ, ಶುಭಹಾರೈಸಿದರು. ವೇದಿಕೆಯಲ್ಲಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ನ.ಸೀತಾರಾಮ, ಕೋಶಾಧಿಕಾರಿ ಸುಧಾಕರ ಕಾಮತ್ ವಿನೋಬನಗರ, ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧ್ಯಕ್ಷ ಗುರುರಾಜ್ ಭಟ್ ಅಡ್ಕಾರು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ ಸ್ವಾಗತಿಸಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗಿರೀಶ್ ಕುಮಾರ್ ಅವರು ವಂದಿಸಿದರು. ಸಹಶಿಕ್ಷಕಿ ಫಾವನ ಅವರು ಕಾರ್ಯಕ್ರಮ ನಿರೂಪಿಸಿದರು.
ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ರಾಷ್ಟ್ರೋತ್ಥಾನ ಶಿಶುಮಂದಿರದ ವಿದ್ಯಾರ್ಥಿಗಳಿಗೆ, ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ, ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಶಾಲಾ ಅಧ್ಯಾಪಕರಿಗೆ ಮತ್ತು ಪೋಷಕರಿಗೆ ಹಲವು ಕ್ರೀಡಾಸ್ಪರ್ಧೆಗಳು ನಡೆಯುತ್ತಿದೆ.