ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

0


ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ವಾರ್ಷಿಕ ಕ್ರೀಡಾಕೂಟ ನಡೆಯಿತು.
ಕ್ರೀಡಾಕೂಟಕ್ಕೆ ಶಾಲಾ ಸಂಚಾಲಕ ಜಾಕೆ ಸದಾನಂದ ಗೌಡ ಅವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.
ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ.ಎಂ.ಸಿ ಅಧ್ಯಕ್ಷ ಸಿ ಹೆಚ್ ಅಬ್ದುಲ್ ಖಾದರ್ ವಹಿಸಿದರು.
ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ಜಯಲತಾ ಕೆ.ಆರ್ ಇದ್ದರು. ಕ್ರೀಡಾ ಪ್ರತಿಜ್ಞಾವಿಧಿಯನ್ನು ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್ ಬೋಧಿಸಿದರು. ಶಿಕ್ಷಕ ಕುಮಾರ್ ಲಮಾಣಿ, ಸಿಬ್ಬಂದಿ ಬೇಬಿ.ಕೆ ಕಾರ್ಯಕ್ರಮಕ್ಕೆ ಸಹಕರಿಸಿದರು. ಶಿಕ್ಷಕಿ ಸವಿತಾ ಕುಮಾರಿ ಸ್ವಾಗತಿಸಿ, ಶಿಕ್ಷಕಿ ಮೀನ ಕುಮಾರಿ ವಂದಿಸಿದರು. ಶಿಕ್ಷಕ ಶಿವಪ್ರಕಾಶ ಕುದ್ಪಾಜೆ ಕಾರ್ಯಕ್ರಮ ನಿರೂಪಿಸಿದರು.