ಪೆರಾಜೆ: ಅಮೆಚೂರು ಅಂಗನವಾಡಿ ಕಾರ್ಯಕರ್ತೆ ಹರಿಣಿ ಅಸೌಖ್ಯದಿಂದ ನಿಧನ

0

ಪೆರಾಜೆ ಗ್ರಾಮದ ಅಮೆಚೂರು ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಹರಿಣಿ ಅವರು ಅಸೌಖ್ಯದಿಂದಾಗಿ ಡಿ.21ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 45 ವರ್ಷ ವಯಸ್ಸಾಗಿತ್ತು.

ಕಳೆದ 12 ವರ್ಷಗಳಿಂದ ಅಮೆಚೂರು ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಹರಿಣಿ ಅವರು ಕಳೆದ ಆರು ತಿಂಗಳಿನಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.


ಡಿ.21ರಂದು ಬೆಳಿಗ್ಗೆ ಮನೆಯಲ್ಲಿ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.
ಮೃತರು ಪುತ್ರ ಯಕ್ಷಿತ್ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.