ಪ್ರತಿಷ್ಠಿತ ರಾಜ್ಯ ಒಕ್ಕಲಿಗರ ಸಂಘದ ಆಡಳಿತ ಮಂಡಳಿ ನಿರ್ದೇಶಕರಾಗಿ ೪ನೇ ಅವಧಿಗೆ ಆಯ್ಕೆಯಾಗಿ ಇದೀಗ ಉಪಾಧ್ಯಕ್ಷರಾಗಿ ಎರಡನೇ ಬಾರಿಗೆ ಬಹುಮತದಿಂದ ಆಯ್ಕೆಯಾಗಿರುವ ಡಾ.ರೇಣುಕಾಪ್ರಸಾದ್ ಕೆ.ವಿ.ಯವರನ್ನು ಸುಳ್ಯ ಜಟ್ಟಿಪಳ್ಳದ ಶ್ರೀರಾಮ ಭಜನಾ ಸೇವಾ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀರಾಮ ಭಜನಾ ಸೇವಾ ಸಂಘದ ಅಧ್ಯಕ್ಷ ಎಂ.ಆರ್.ಹರಿಶ್ಚಂದ್ರ, ಉಪಾಧ್ಯಕ್ಷ ಮಾಜಿ ನ.ಪಂ. ಸದಸ್ಯ ರಮಾನಂದ ರೈ, ಪ್ರಧಾನ ಕಾರ್ಯದರ್ಶಿ ರಘುನಾಥ ಜಟ್ಟಿಪಳ್ಳ, ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.