ಇಂದು ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ

0

ಸರತಿ ಸಾಲಿನಲ್ಲಿ ನಿಂತು ಮತದಾರರಿಂದ ಬಿರುಸಿನ ಮತದಾನ

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಇಂದು ಮತದಾನ ಪ್ರಾರಂಭಗೊಂಡಿದೆ.
ಬೆಳಿಗ್ಗೆ ಗಂಟೆ 9.00 ರಿಂದ ಮತದಾನ ಪ್ರಾರಂಭಗೊಂಡಿದ್ದು ಮತದಾರರು ಮತ ಚಲಾಯಿಸುತ್ತಿದ್ದಾರೆ.
ಮತಗಟ್ಟೆಯ ಹೊರಗಡೆ ಪಕ್ಷದವರು ಅಭ್ಯರ್ಥಿಗಳ ಪರ ಮತ ಯಾಚನೆ ಮಾಡುತ್ತಿದ್ದಾರೆ.


ಮತಚಲಾಯಿಸಲು ಎರಡು ಬೂತ್ ಗಳನ್ನು ಮಾಡಲಾಗಿದೆ.
ಮತದಾರರು ಸಹಕಾರಿ ಸಂಘದ ಸಭಾಂಗಣದಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದು ಸಂಜೆ 4.00 ಗಂಟೆಯವರೆಗೆ ಮತದಾನ ನಡೆಯಲಿದೆ.
ಬಳಿಕ ಮತ ಎಣಿಕೆ ನಡೆಯಲಿದ್ದು ವಿಜಯಿ ಅಭ್ಯರ್ಥಿಗಳ ಘೋಷಣೆಯಾಗಲಿದೆ.