ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸಂದೀಪ್ ಕದಿಕಡ್ಕ ಗೆಲುವು
ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಹಿಂದುಳಿದ ವರ್ಗ ಪ್ರವರ್ಗ ಎ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಂದೀಪ್ ಕದಿಕಡ್ಕ ಅವರು 419 ಮತ ಪಡೆದು ವಿಜಯಿಯಾಗಿದ್ದಾರೆ. ಅವರ ಎದುರಾಳಿ ಕಾಂಗ್ರೆಸ್ ಬೆಂಬಲಿತ ಸಹಕಾರಿ ಅಭಿವೃದ್ಧಿ ರಂಗದ ಅಭ್ಯರ್ಥಿ ನ್ಯಾಯವಾದಿ ಮಹಮ್ಮದ್ ಪವಾಝ್ ಅವರು 273 ಮತ ಪಡೆದು ಪರಾಜಿತರಾಗಿದ್ದಾರೆ.