ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಡಿ. 23ರಂದು ಸಂಜೆ ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಬೇಟೆ ನೀಡಲಿದ್ದು, ಈ ಸಂದರ್ಭದಲ್ಲಿ ಭಕ್ತಾದಿಗಳ ಸಭೆ ನಡೆಸಲಿದ್ದಾರೆ.
ಶ್ರೀ ದೇವಳದ ಆಡಳಿತ ಮಂಡಳಿ, ಜೀರ್ಣೋದ್ಧಾರ ಸಮಿತಿ ಮತ್ತು ಭಕ್ತಾದಿಗಳನ್ನೊಳಗೊಂಡ ಸಭೆ ಸಂಜೆ 4.00 ಗಂಟೆಗೆ ನಡೆಯಲಿದ್ದು, ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿ ಸ್ವಾಮೀಜಿಯವರು ಮಾರ್ಗದರ್ಶನ ನೀಡಲಿದ್ದಾರೆ. ಪ್ರಸ್ತುತ ದೇವಸ್ಥಾನದಲ್ಲಿ 48 ದಿನಗಳ ನಿತ್ಯ ಭಜನಾ ಸಂಕೀರ್ತನೆ ನಡೆಯುತ್ತಿದ್ದು, ಸಭೆಯ ಬಳಿಕ ಭಜನಾ ಸಂಕೀರ್ತನೆಯಲ್ಲೂ ಸ್ವಾಮೀಜಿಯವರು ಪಾಳ್ಗೊಳ್ಳಲಿದ್ದಾರೆ. ಸಭೆಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಆಡಳಿತ ಮತ್ತು ಜೀರ್ಣೋದ್ಧಾರ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.