ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಕುಮಾರಸ್ವಾಮಿ ಪ್ರೌಢಶಾಲಾ ಹಾಗೂ ಪದವಿಪೂರ್ವ ಕಾಲೇಜಿನ ಎಲ್ಲಾ ವಿದ್ಯಾರ್ಥಿನಿಯರಿಗೆ ಸೈಬರ್ ಕ್ರೈಂ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ಶಿಬಿರವನ್ನು ಶನಿವಾರ ವಿದ್ಯಾಲಯದ ಸಭಾಂಗಣದಲ್ಲಿ ಏರ್ಪಡಿಸಲಾಯಿತು.
ಪುತ್ತೂರು ಮಹಿಳಾ ಠಾಣೆಯ ಪೊಲೀಸ್ ಉಪ ನಿರೀಕ್ಷಕಿ ಸವಿತಾ ಅವರು ಸೈಬರ್ ಕ್ರೈಂ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ವಿವರವಾದ ಮಾಹಿತಿಗಳನ್ನು ವಿದ್ಯಾರ್ಥಿನಿಯರಿಗೆ ನೀಡಿದರು. ಹಾಗೆಯೇ ವಿದ್ಯಾರ್ಥಿನಿಯ ರೊಂದಿಗೆ ಚರ್ಚಾಗೋಷ್ಠಿ ಕೂಡ ನಡೆದು ಪ್ರಶ್ನೆಗಳಿಗೆ ಉತ್ತರಿಸಿದರು. ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಹಾಗೂ ಶಾಲಾ ಸಂಚಾಲಕ ಚಂದ್ರಶೇಖರ ನಾಯರ್ ಅಧ್ಯಕ್ಷತೆ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಕಡಬ ತಾಲೂಕು ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಶಿವಪ್ರಸಾದ್ ಮೈಲೇರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಭೆಯಲ್ಲಿ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಡಾl ಸಂಕೀರ್ಥ ಹೆಬ್ಬಾರ್ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ವಿದ್ಯಾರತ್ನ ಹಾಗೂ ವಿದ್ಯಾರ್ಥಿನಿಯರೊಂದಿಗೆ ಎಲ್ಲಾ ಶಿಕ್ಷಕಿ, ಉಪನ್ಯಾಸಕಿ ವೃಂದ ದವರು ಕೂಡ ಹಾಜರಿದ್ದರು.