ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯ ರಲ್ಲಿ ಸೋಮಶೇಖರ ಕೊಯಿಂಗಾಜೆ ನೇತೃತ್ವದ ಸಹಕಾರಿಗಳ
ಅಭಿವೃದ್ಧಿ ರಂಗವು 9 ಸ್ಥಾನಗಳನ್ನು ಪಡೆದು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ನಡೆಸುತ್ತಿದ್ದ ವೇಳೆ ಸೋಮಶೇಖರ ಕೊಯಿಂಗಾಜೆ ಬಗ್ಗೆ ಬಿಜೆಪಿ ಕಾರ್ಯಕರ್ತರೊಬ್ಬರು ವೈಯಕ್ತಿಕವಾಗಿ ನಿಂಧಿಸಿದ್ದಾರೆ ಎಂದು ಸ್ಥಳದಲ್ಲಿದ್ದ ಬಿಜೆಪಿ ಕಾರ್ಯಕರ್ತರ ಮಧ್ಯೆ ಪರಸ್ಪರ ಮಾತಿನ ಚಕಮಕಿ ನಡೆದ ಘಟನೆ ವರದಿಯಾಗಿದೆ.
ಸೋಮಶೇಖರ ಕೊಯಿಂಗಾಜೆ ಅವರು ವಿಜಯೋತ್ಸವದಲ್ಲಿ ಮಾತನಾಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರೊಬ್ಬರು ತನ್ನನ್ನು ವೈಯಕ್ತಿಕವಾಗಿ ನಿಂದಿಸಿದ್ದಾರೆ ಎಂದು ಸೋಮಶೇಖರ ಹೇಳಿದಾಗ ಸ್ಥಳದಲ್ಲಿದ್ದ ಬಿಜೆಪಿ ಕಾರ್ಯಕರ್ತ ಧನಪಾಲರು ಆಕ್ಷೇಪ ವ್ಯಕ್ತಪಡಿಸಿದರು. ಆಗ ಸವರ ಹಾಗೂ ಸೋಮಶೇಖರ ಕೊಯಿಂಗಾಜೆಯವರ ಮಧ್ಯೆ ಮಾತಿನ ಚಕಮಕಿ ಪ್ರಾರಂಭಗೊಂಡಿತು. ಈ ಮಾತಿನ ಚಕಮಕಿ ಸ್ಥಳದಲ್ಲಿದ್ದ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಏರ್ಪಟ್ಟಿತು.
ಆಗ ಸ್ಥಳದಲ್ಲಿದ್ದ ಪೊಲೀಸರು ಎರಡೂ ಪಕ್ಷದ ಕಾರ್ಯಕರ್ತರನ್ನು ಸಮಾಧಾನಪಡಿಸಿ ಪರಿಸ್ಥಿತಿ ಕೈಮೀರದಂತೆ ನೋಡಿಕೊಂಡರು.
.