ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ

0

ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಡಿ. 23ರಂದು ಗಣಿತ ಸಂಘದ ವತಿಯಿಂದ ಆಚರಿಸಲಾಯಿತು. ಇದರ ಸಲುವಾಗಿ ಪ್ರೌಢಶಾಲಾ ಮುಖ್ಯೋಪಾಧ್ಯಾರಾದ ಗಿರೀಶ್ ಕುಮಾರ್ ಗಣಿತ ದಿನಾಚರಣೆಯ ಮಹತ್ವ ಹಾಗೂ ಗಣಿತಜ್ಞರಾದ ಶ್ರೀನಿವಾಸ ರಾಮಾನುಜನ್ ರವರ ಗಣಿತ ಉದಾಹರಣೆಗಳನ್ನು ನೀಡುತ್ತಾ, ಅವರ ಆಸಕ್ತಿಯ ಚರಿತ್ರೆಯನ್ನು ಸ್ತೂಲವಾಗಿ ಮಕ್ಕಳಿಗೆ ತಿಳಿಸಿಕೊಟ್ಟರು.

ಶಾಲಾ ವಿದ್ಯಾರ್ಥಿನಿಯರಾದ ಪ್ರಣವಿ, ತೃಷ, ಅನ್ವಿತಾ, ಲಹರಿ, ಸಾನ್ವಿ ಗಣಿತದ ಮೂಲ ಚಿಹ್ನೆಯನ್ನು ಪ್ರಾತ್ಯಕ್ಷಿಕೆ ಮೂಲಕ ಮಾಡಿ ತೋರಿಸಿದರು. ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಜಯಪ್ರಸಾದ ಕಾರಿಂಜ, ವಿದ್ಯಾ ಸಂಸ್ಥೆಯ ಶಿಕ್ಷಕ ವೃಂದದವರು ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶ್ರೀಮತಿ ಪೂರ್ಣಿಮಾ ಮತ್ತು ಶ್ರೀಮತಿ ಪ್ರಜ್ಞ ಸಂಯೋಜಿಸಿದರು.