ಸುಳ್ಯ ಸೈಂಟ್ ಬ್ರಿಜಿಡ್ಸ್ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

0

ಸುಳ್ಯ ಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬವನ್ನು ಡಿ.24 ರಂದು ಆಚರಿಸಲಾಯಿತು.

ವಿದ್ಯಾರ್ಥಿಗಳು ತಯಾರಿಸಿದ ಗೋದಲಿಯಲ್ಲಿ ಬಾಲಯೇಸುವಿನ ಪ್ರತಿಮೆಯನ್ನು ಶಾಲಾ ಸಂಚಾಲಕರಾದ ರೆ. ಫಾ. ವಿಕ್ಟರ್ ಡಿಸೋಜ ರವರು ಇರಿಸುವುದರೊಂದಿಗೆ ಕಾರ್ಯಕ್ರಮ ವನ್ನು ಪ್ರಾರಂಭಿಸಲಾಯಿತು.

ಮುಖ್ಯ ಅತಿಥಿಗಳಾಗಿ ಶಾಲಾ ಪೋಷಕ ಸಮಿತಿ ಯ ಉಪಾಧ್ಯಕ್ಷ ನವೀನ್ ಚಂದ್ರ ಚಾತುಬಾಯಿ ,ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ರು ನವೀನ್ ಮಚಾದೋ ,ನಗರ ಪಂಚಾಯತ್ ಸದಸ್ಯರಾದ ಡೇವಿಡ್ ಧೀರಾ ಕ್ರಾಸ್ತ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಆಗಮಿಸಿದ ಅಧ್ಯಕ್ಷ ಸೀಪುಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಾಜಿ ಜೀ ಇಬ್ರಾಹಿಂ ಸೀಪುಡ್ ರವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಮುಖ್ಯ ಶಿಕ್ಷಕಿ ಸಿಸ್ಟರ್ ಅಂತೋನಿ ಮೇರಿ ಕಾರ್ಯಕ್ರಮ ಆಗಮಿಸಿದ ಅತಿಥಿಗಳನ್ನು ಗೌರವಿಸಿದರು.

ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.
ಶಿಕ್ಷಕಿ ವಲ್ಸ ಸ್ವಾಗತಿಸಿ,

ಶಿಕ್ಷಕಿ ಶ್ರೀಮತಿ ಮೇರಿ ಡಿಸೋಜ ವಂದಿಸಿದರು. ಕಾರ್ಯಕ್ರಮ ವನ್ನು ಶಿಕ್ಷಕಿ ಶ್ರೀಮತಿ ದೀಪಿಕಾ ಇವರು ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ ದವರು ಮತ್ತು ಅಡುಗೆ ಸಿಬ್ಬಂದಿಯ ವರು ಸಹಕರಿಸಿದರು.