ಡಿ.31 : ಪೆರುವಾಜೆ ಶಾಲಾ ಮುಖ್ಯೋಪಾಧ್ಯಾಯ ತೇಜಪ್ಪ ಎಸ್.ಸಂಪ್ಯಾಡಿ ನಿವೃತ್ತಿ

0

ಪೆರುವಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ‌ ಮುಖ್ಯೋಪಾಧ್ಯಾಯರಾದ ತೇಜಪ್ಪ ಎಸ್.ಸಂಪ್ಯಾಡಿಯವರು ಡಿ.31 ರಂದು ಸೇವಾ ನಿವೃತ್ತಿಗೊಳ್ಳಲಿದ್ದಾರೆ.
1994 ರಿಂದ ಶಿಕ್ಷಣ ಇಲಾಖೆಯ ವಿವಿಧ ಕಡೆಗಳ ಶಾಲೆಗಳಲ್ಲಿ ಸುದೀರ್ಘ 30 ವರ್ಷ 7 ತಿಂಗಳುಗಳ ಕಾಲ ಇವರು ಸೇವೆ ಸಲ್ಲಿಸಿದ್ದರು.
ಪ್ರಾರಂಭದಲ್ಲಿ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ 4 ವರ್ಷ, ಸುಳ್ಯದ ಹಾಲೆಮಜಲು ಸ.ಹಿ.ಪ್ರಾ.ಶಾಲೆಯಲ್ಲಿ 2 ವರ್ಷ, ನಡುಗಲ್ಲು ಶಾಲೆಯಲ್ಲಿ 3 ವರ್ಷ,ಮಡಪ್ಪಾಡಿ ಶಾಲೆಯಲ್ಲಿ 13 ವರ್ಷ ,ಎಣ್ಮೂರು ಶಾಲೆಯಲ್ಲಿ 6 ವರ್ಷಗಳ ಕಾಲ ಸೇವೆ ಸಲ್ಲಿಸಿ ಬಳಿಕ ಮುಖ್ಯೋಪಾಧ್ಯಾಯರಾಗಿ ಭಡ್ತಿ ಹೊಂದಿ ಪೆರುವಾಜೆ ಶಾಲೆಗೆ ವರ್ಗಾವಣೆಗೊಂಡರು.
ಪೆರುವಾಜೆ ಸ.ಹಿ.ಪ್ರಾ.ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ 2 ವರ್ಷ 7 ತಿಂಗಳು ಸೇವೆ ಸಲ್ಲಿಸಿ ಡಿ.31ರಂದು ಸೇವಾ ನಿವೃತ್ತಿಗೊಳ್ಳಲಿದ್ದಾರೆ.
ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ನಿರ್ಣಾಯಕರಾಗಿ ಸೇವೆ ಸಲ್ಲಿಸುತ್ತಿದ್ದ ಇವರು ಶಿಕ್ಷಕರ ತರಬೇತು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದರು.
ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಸಾಮಾಜಿಕ ,ಧಾರ್ಮಿಕ ಕ್ಷೇತ್ರದಲ್ಲಿಯೂ ತನ್ನನ್ನು ತೊಡಗಿಸಿಕೊಂಡಿದ್ದ ಇವರು ಹಲವಾರು ಅಭಿವೃದ್ಧಿ ಕೆಲಸಗಳಲ್ಲಿ ಮುಂಚೂಣಿಯಲ್ಲಿದ್ದರು.
ಇವರು ಗುತ್ತಿಗಾರು ಗ್ರಾಮದ ಸಂಪ್ಯಾಡಿ ದಿ.ರಾಮಣ್ಣ ಗೌಡ ಮತ್ತು ದಿ.ಶ್ರೀಮತಿ ಯಶೋಧ ದಂಪತಿ ಪುತ್ರರಾದ ಇವರ ಪತ್ನಿ ಶ್ರೀಮತಿ ಶೀಲಾವತಿ ಎ.ಎಸ್. ರವರು ದೊಡ್ಡತೋಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಪುತ್ರರಾದ ಲೇಖನ್ ಮತ್ತು ಕೇತನ್ ರವರು ಇಂಜಿನಿಯರಿಂಗ್ ಪದವಿ ಮುಗಿಸಿ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದಾರೆ.