ಜಯನಗರ ಶಾಲೆಯಲ್ಲಿ ವಾರ್ಷಿಕೋತ್ಸವ

0

ಕುಣಿದು ಕುಪ್ಪಳಿಸಿದ ಶಾಲಾ ಮಕ್ಕಳು

ಜಯನಗರ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಡಿ ೨೭ ರಂದು ಶಾಲಾ ರಂಗಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸ್ಥಳೀಯ ನ. ಪಂ ಸದಸ್ಯರಾದ ಬಾಲಕೃಷ್ಣ ಭಟ್ ಕೊಡಂಕೇರಿ ಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು.
ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ನೀರಬಿದಿರೆ ವಹಿಸಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭಾರೈಸಿದರು.
ನ ಪಂ ಸದಸ್ಯ ಬಾಲಕೃಷ್ಣ ಭಟ್ ಕೊಡಂಕೇರಿ ದೀಪ ಬೆಳಗಸಿ ಉದ್ಘಾಟಿಸಿದರು.

ವೇದಿಕೆಯಲ್ಲಿ ನ.ಪಂ ಸದಸ್ಯೆ ಶಿಲ್ಪಾ ಸುದೇವ್, ಶಿಕ್ಷಣ ಇಲಾಖೆ ಸಂಯೋಜಕಿ ಶ್ರೀಮತಿ ಸಂಧ್ಯಾಮಣಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಮುದ್ದಪ್ಪ, ಉಪಾಧ್ಯಕ್ಷೆ ನಳಿನಿ ಭಟ್, ಕಾರ್ಯಕ್ರಮದ ಪ್ರೋತ್ಸಾಹಕರಾದ ಹನೀಫ್ ಕಾಂಟ್ರಾಕ್ಟರ್, ಮಂಜುನಾಥ್ ಬಳ್ಳಾರಿ, ನಿವೃತ್ತ ದೈಹಿಕ ಶಿಕ್ಷಕ ತೀರ್ಥರಾಮ ಅಡ್ಕಬಳೆ ಮೊದಲಾದವರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ವೀಣಾ ಸ್ವಾಗತಿಸಿ, ಶಿಕ್ಷಕಿಯರಾದ ನಳಿನಾಕ್ಷಿ ವಂದಿಸಿ, ಮಮತಾ ನಿರೂಪಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರುಗಳಿಗೆ ಏರ್ಪಡಿಸಲಾಗಿದ್ದ ಆಟೋಟ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.
ಬಳಿಕ ನಡೆದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವರ್ಣ ರಂಜಿತ ವೇದಿಕೆಯಲ್ಲಿ ಶಾಲಾ ವಿದ್ಯಾರ್ಥಿಗಳ ವೈವಿಧ್ಯಮಯ ನೃತ್ಯಗಳು ನಡೆಯಿತು.
ಎಸ್ ಡಿ ಎಂ ಸಿ ಸದಸ್ಯರು, ವಿದ್ಯಾರ್ಥಿಗಳ ಪೋಷಕರು, ಸ್ಥಳೀಯರು ನೂರಾರು ಮಂದಿ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ಸಹ ಶಿಕ್ಷಕಿಯರುಗಳಾದ ಭಾರತಿ, ಅಶ್ವಿನಿ, ಸಹಕರಿಸಿದರು.
ಸಾಂಸ್ಕೃತಿ ಕಾರ್ಯಕ್ರಮದ ನೃತ್ಯ ತರಬೇತುದಾರರಾಗಿ ಮುಖೇಶ್ ಹಳೆಗೇಟು ಧ್ವನಿ ಮತ್ತು ದೀಪಾಲಂಕಾರದಲ್ಲಿ ದುರ್ಗಾ ಸೌಂಡ್ಸ್ ಹಳೆಗೇಟು ಸಹಕರಿಸಿದ್ದವು.