ಭಾರತದ ಆರ್ಥಿಕ ಸುಧಾರಣೆಗಳ ಹರಿಕಾರ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಆಧುನಿಕ ಭಾರತದ ಆರ್ಥಿಕತೆಯ ರೂವಾರಿಯಾಗಿದ್ದರು. ದಶಕಗಳ ಕಾಲ ರಾಷ್ಟ್ರದ ಪ್ರಗತಿಗೆ ಅನೇಕ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಅವರನ್ನು ರಾಷ್ಟ್ರ ಸದಾ ಸ್ಮರಿಸುತ್ತದೆ. ಆಹಾರ ಭದ್ರತೆಕಾಯ್ದೆ, ಶಿಕ್ಷಣ ಹಕ್ಕು ಕಾಯ್ದೆ, ಉದ್ಯೋಗ ಖಾತ್ರಿ ಯೋಜನೆ ಸರ್ವ ಶಿಕ್ಷ ಅಭಿಯಾನ, ಮುಂತಾದ ಹಲವಾರು ಜನೋಪಯೋಗಿ ಕಾನೂನುಗಳನ್ನು ಜ್ಯಾರಿ ಮಾಡಿದ ಆರ್ಥಿಕ ತಜ್ಞ,ಅಜಾತಶತ್ರು, ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬಸ್ಥರಿಗೆ ನೋವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ ಎಂದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ
ಪಿ. ಎಸ್. ಗಂಗಾಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.