ಸುಳ್ಯ ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ವತಿಯಿಂದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ರಾಜ್ಯಧ್ಯಕ್ಷರ ಭೇಟಿ

0

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣ ಗೌಡರು ಡಿ.27 ರಂದು ಸುಳ್ಯದ ಐ ಬಿ ಗೆ ಭೇಟಿ ನೀಡಿದ ಸಂಧರ್ಭ ಸುಳ್ಯ ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ವತಿಯಿಂದ ಅಧ್ಯಕ್ಷರನ್ನು ಭೇಟಿ ಮಾಡಿ ಹೂ ಗುಚ್ಛ ನೀಡಿ ಸ್ವಾಗತಿಸಲಾಯಿತು.

ಈ ವೇಳೆ ಸುಳ್ಯ ಶಿಕ್ಷಣ ಸಂಪನ್ಮೂಲ ಕೇಂದ್ರದ ವತಿಯಿಂದ ಮಕ್ಕಳ ರಕ್ಷಣಾ ಕಾರ್ಯಕ್ರಮದ ಕುರಿತು ತಾಲೂಕು ವ್ಯಾಪ್ತಿಯಲ್ಲಿ ಮಾಡುತ್ತಿರುವ ಕಾರ್ಯ ಚಟುವಟಿಕೆಗಳು ಮತ್ತು ಜಿಲ್ಲಾ ಕಮಿಟಿಯ ಸಹ ಭಾಗಿತ್ವದಲ್ಲಿ ನಡೆಸುವ 2024 ರ ಮಕ್ಕಳ ಮಾಸೋತ್ಸವ ಕಾರ್ಯಕ್ರಮಗಳ ಕುರಿತು ಸಮಿತಿಯ ಸಂಘಟನಾ ಕಾರ್ಯದರ್ಶಿ ಹಾಗೂ ದ ಕ ಜಿಲ್ಲಾ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಹ ಸಂಚಾಲಕ ಹಸೈನಾರ್ ಜಯನಗರ ರವರು ಅಧ್ಯಕ್ಷರಿಗೆ ಮಾಹಿತಿ ನೀಡಿದರು.

ಈ ಸಂಧರ್ಭ ಮೆಚ್ಚುಗೆ ವ್ಯಕ್ತ ಪಡಿಸಿದ ರಾಜ್ಯ ಅಧ್ಯಕ್ಷರು ಸರಕಾರಿ ಇಲಾಖೆಯ ಅಧಿಕಾರಿಗಳೊಂದಿಗೆ ಈ ರೀತಿಯ ಸಂಘ ಸಂಸ್ಥೆಗಳ ಸಹಕಾರ ವಿದ್ದಲ್ಲಿ ಮಕ್ಕಳ ರಕ್ಷಣೆ ಮತ್ತು ಅವರ ಹಕ್ಕುಗಳ ಬಗ್ಗೆ ಕಾರ್ಯ ನಿರ್ವಹಿಸಲು ಉತ್ತಮವಾಗುತ್ತದೆ. ಮಕ್ಕಳ ರಕ್ಷಣೆ ಅಧಿಕಾರಿಗಳ ಕರ್ತವ್ಯ ಅದರೊಂದಿಗೆ ಸಮಾಜದ ಪ್ರತಿಯೊಬ್ಬ ನಾಗರಿಕರ ಕರ್ತವ್ಯವೂ ಆಗಿರುತ್ತದೆ ಎಂದರು.

ಈ ಸಂಧರ್ಭ ಶಿಕ್ಷಣ ಸಂಪನ್ಮೂಲ ಕೇಂದ್ರ ತಾಲೂಕು ಸಮಿತಿಯ ಅಧ್ಯಕ್ಷ ಶಂಕರ್ ಪೆರಾಜೆ, ಕರ್ನಾಟಕ ಸರಕಾರ ಮಕ್ಕಳ ರಕ್ಷಣಾ ಸಮಿತಿ ದ ಕ ಸಮಿತಿ ಯ ಸದಸ್ಯ ಅಬೂಬಕ್ಕರ್ ಅಡ್ಕಾರ್ ಉಪಸ್ಥಿತರಿದ್ದರು.