ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆ

0

ಮತದಾನ ಆರಂಭ  –  ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಬಿಜೆಪಿ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು

ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನೂತನ ನಿರ್ದೇಶಕರುಗಳ ಆಯ್ಕೆಗೆ ಚುನಾವಣೆಯ ಹಿನ್ನೆಲೆಯಲ್ಲಿ ಅರಂತೋಡಿನ ತೆಕ್ಕಿಲ್ ಸಮುದಾಯ ಭವನದಲ್ಲಿ  ಮತದಾನ  ಆರಂಭಗೊಂಡಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಹಕಾರಿ ಸಂಘದ ಒಟ್ಟು 12 ನಿರ್ದೇಶಕ ಸ್ಥಾನಗಳಿಗೆ 25 ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಅವರ ನೇತೃತ್ವದಲ್ಲಿ ಮತಯಾಚನೆ ಮಾಡುತ್ತಿದ್ದು, ಈ ಬಾರಿಯೂ ಎಲ್ಲಾ 12 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಕ್ಲೀನ್ ಸ್ವೀಫ್ ಗುರಿ ಎನ್ನುತ್ತಿದ್ದಾರೆ.

ಮತ್ತೊಂದೆಡೆ  ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜನಾರ್ದನ ಅಡ್ಕಬಳೆ ಅವರ ನೇತೃತ್ವದಲ್ಲಿ ಮತಯಾಚನೆ ಮಾಡುತ್ತಿದ್ದ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.