ರೋಟರಿ ಕ್ಲಬ್ ಸುಳ್ಯ ಇವರ ನೇತೃತ್ವದಲ್ಲಿ ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಹಾಗೂ ಇನ್ನಿತರ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ಡಿ.29ರಂದು ಬೆಳಿಗ್ಗೆ 9.00ರಿಂದ ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆ ನಡೆಯಲಿದೆ.
ಸುಳ್ಯ ರೋಟರಿ ಕ್ಲಬ್ ಪೂರ್ವಾಧ್ಯಕ್ಷ, ಸಹಕಾರಿ ರತ್ನ ಸವಣೂರು ಸೀತಾರಾಮ ರೈಯವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಶ್ರೀಮತಿ ಯೋಗಿತಾ ಗೋಪಿನಾಥರವರು ಅಧ್ಯಕ್ಷತೆ ವಹಿಸಲಿದ್ದಾರೆ.
ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ಉಚಿತ ತಪಾಸಣೆಯೊಂದಿಗೆ ಅಗತ್ಯವುಳ್ಳವರಿಗೆ ಉಚಿತವಾಗಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮಾಡಲಾಗುವುದು ಎಂದು ಸಂಘಟಕರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.