ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆ

0

ಸಾಲಗಾರ ಪರಿಶಿಷ್ಟ ಪಂಗಡ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ದಿನೇಶ ಅರಮನೆಗಯ ಗೆಲುವು

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಇಂದು ನಡೆದ ಚುನಾವಣೆಯಲ್ಲಿ ಸಾಲಗಾರ ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದಿನೇಶ್ ಅರಮನೆಗಯ ಅವರು 663 ಮತ ಪಡೆದು ವಿಜಯಿಯಾಗಿದ್ದಾರೆ‌.

ಅವರಿಗೆ ಎದುರಾಳಿಯಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಾರಾಯಣ ನಾಯ್ಕ ಮೊಟ್ಟೆಂಗಾರ್ ಅವರು 197 ಮತ ಪಡೆದು ಸೋಲು ಕಂಡಿದ್ದಾರೆ.