ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆ

0

ಸಾಮಾನ್ಯ ಮಹಿಳಾ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಇಂದು ನಡೆದ ಚುನಾವಣೆಯಲ್ಲಿ ಸಾಲಗಾರ ಸಾಮಾನ್ಯ ಮಹಿಳಾ ಕ್ಷೇತ್ರದ ಎರಡೂ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಶ್ರೀಲತಾ ದೇರಾಜೆ ಅವರು 684 ಮತ ಹಾಗೂ ಲೋಚನ ಕೊಳಲುಮೂಲೆ ಅವರು 623 ಮತ ಪಡೆದು ಗೆಲುವು ಸಾಧಿಸಿದ್ದಾರೆ.

ಅವರಿಗೆ ಎದುರಾಳಿಯಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಕಣದಲ್ಲಿದ್ದ ವನಿತ ಮೆತ್ತಡ್ಕ 209 ಮತ ಹಾಗೂ ವಸಂತಿ ಬಾಳೆಕಜೆ ಅವರು 175 ಮತ ಪಡೆದು ಸೋಲನುಭವಿಸಿದ್ದಾರೆ.