ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆ

0

ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರಶೇಖರ ತೊಡಿಕಾನ ಗೆಲುವು

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಇಂದು ನಡೆದ ಚುನಾವಣೆಯಲ್ಲಿ ಸಾಲಗಾರರ ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಚಂದ್ರಶೇಖರ ಎ.ಎಸ್. ಅವರು 576 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ಅವರಿಗೆ ಎದುರಾಳಿಯಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣದಲ್ಲಿದ್ದ ರವೀಂದ್ರ ಪೂಜಾರಿ ಅವರು 275 ಮತ ಪಡೆದು ಪರಾಭವಗೊಂಡಿದ್ದಾರೆ.