ವಿಜೃಂಭಣೆಯಿಂದ ನಡೆದ ಐವರ್ನಾಡು ಮುಚ್ಚಿನಡ್ಕ ಕೊರಗಜ್ಜ ದೈವದ ನೇಮೋತ್ಸವ

0

ಐವರ್ನಾಡು ಗ್ರಾಮದ ಮುಚ್ಚಿನಡ್ಕ ಸ್ವಾಮಿ ಕೊರಗಜ್ಹ ಸೇವಾ ಸಮಿತಿಯಿಂದ 2 ನೇ ವರ್ಷದ ಗಣಹೋಮ ಮತ್ತು ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವವು ಡಿ.28 ರಂದು ಭಕ್ತಿ,ಸಂಭ್ರಮದಿಂದ ನಡೆಯಿತು.


ಬೆಳಿಗ್ಗೆ ಗಣಪತಿ ಹೋಮ,ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ರಾತ್ರಿ ಗಂಟೆ 6.30 ಕ್ಕೆ ಕೊರಗಜ್ಜ ದೈವದ ಭಂಡಾರ ತೆಗೆಯಲಾಯಿತು.ನಂತರ ಗುರುದೇವ ಮಹಿಳಾ ಭಜನಾ ತಂಡದವರಿಂದ ಭಜನಾ ಕಾರ್ಯಕ್ರಮ ನಡೆಯಿತು.


ರಾತ್ರಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ಬಳಿಕ ಶ್ರೀ ಕೊರಗಜ್ಜ ನೇಮೋತ್ಸವವು ವಿಜೃಂಭಣೆಯಿಂದ ನಡೆಯಿತು.
ಈ ಸಂದರ್ಭದಲ್ಲಿ ಸ್ವಾಮಿ ಕೊರಗಜ್ಜ ಸೇವಾ ಸಮಿತಿ ಆಡಳಿತ ಮೊಕ್ತೇಸರರಾದ ಮಣಿ ಎಂ‌.ಮತ್ತು ಮನೆಯವರು ಕುಟುಂಬಸ್ಥರು ಹಾಗೂ ಸಾವಿರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.