ಸುಳ್ಯದಲ್ಲಿ ಇಂಟೆಕ್ ಸ್ನೇಹ ಸಂಗಮ ರಿಕ್ಷಾ ಚಾಲಕ-ಮಾಲಕರ ಸಂಘ ಅಸ್ತಿತ್ವಕ್ಕೆ

0

ಸುಳ್ಯದಲ್ಲಿ ಇಂಟೆಕ್ ಸ್ನೇಹ ಸಂಗಮ ರಿಕ್ಷಾ ಚಾಲಕ ಮಾಲಕರ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಇಂಟೆಕ್ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಶಾಫಿ ಕುತ್ತಮೊಟ್ಟೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.


ಗೌರವಾಧ್ಯಕ್ಷರಾಗಿ ಹರೀಶ್ಚಂದ್ರ ಪಂಡಿತ್, ಅಧ್ಯಕ್ಷರಾಗಿ ಅನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಅಜ್ಜಾವರ, ಕೋಶಾಧಿಕಾರಿಯಾಗಿ ದೇವಪ್ಪ ನಾಯ್ಕ್, ಸಂಘಟನಾ ಕಾರ್ಯದರ್ಶಿಯಾಗಿ ಸೂಫಿ ಎಲಿಮಲೆ ಆಯ್ಕೆಯಾದರು. ಹಾಗೂ ವಿವಿಧ ಪದಾಧಿಕಾರಿಗಳನ್ನು ಕೂಡಾ ಆಯ್ಕೆ ಮಾಡಲಾಯಿತು.