ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ರಾಗಿ ಆಯ್ಕೆಯಾದ ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಬಿ ಟೀಂನ ಅಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಇವರನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.
ಅರೆಭಾಷೆ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಹಾಗೂ ಸದಸ್ಯರಾದ ತೇಜಕುಮಾರ್ ಕುಡೇಕಲ್ಲು, ಚಂದ್ರಾವತಿ ಬಡ್ಡಡ್ಕ, ಲತಾ ಪ್ರಸಾದ್ ಕುದ್ಪಾಜೆ, ಲೋಕೇಶ್ ಊರುಬೈಲು ಇವರುಗಳು ಶಾಲು ಹೊದಿಸಿ, ಪೇಟ ತೊಡಿಸಿ, ಹಾರ ಹಾಕಿ, ಹೂಗುಚ್ಛ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಜ್ಯೋತಿ ರೇಣುಕಾ ಪ್ರಸಾದ್, ಉಜ್ವಲ್ ಊರುಬೈಲು, ಪ್ರಸನ್ನ ಕಲ್ಲಾಜೆ ಉಪಸ್ಥಿತರಿದ್ದರು.