ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವರ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೋಲ್ಚಾರಿನಲ್ಲಿ ವಿದ್ಯಾರ್ಥಿಗಳಿಗೆ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘವನ್ನು ರಚಿಸಲಾಯಿತು.
ಕಾರ್ಯಕ್ರಮವನ್ನು ಅರೆಭಾಷೆ ಅಕಾಡೆಮಿಯ ಸದಸ್ಯೆ ಶ್ರೀ ಲತಾಪ್ರಸಾದ್ ಕುದ್ಪಾಜೆ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಶಾಲಾಭಿವೃದ್ಧಿ ಅಧ್ಯಕ್ಷ ಸುದರ್ಶನ ಪಾತಿಕಲ್ಲು, ಶಾಲಾ ಮುಖ್ಯೋಧ್ಯಾಯ ಚೆನ್ನಸ್ವಾಮಿ, ಶಾಲಾ ಶಿಕ್ಷಕಿ ಜಲಜಾಕ್ಷಿ ಕೆ ಉಪಸ್ಥಿತರಿದ್ದರು.
ಸಭೆಯಲ್ಲಿ ಅರೆಭಾಷೆ ವಿದ್ಯಾರ್ಥಿನಿ ಸೌಪರ್ಣಿಕಾ ಪಾತಿಕಲ್ಲು ಗಾದೆಯನ್ನು ವಾಚಿಸಿದರು. ಶಿಕ್ಷಕಿ ಜಲಜಾಕ್ಷಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಉಪನ್ಯಾಸಕಿ ಮಮತಾ ಸ್ವಾಗತಿಸಿ, ಕು.ಶ್ರಾವ್ಯ ಕೋಲ್ಚಾರು ವಂದಿಸಿದರು. ಶಿಕ್ಷಕಿ ವಿನುತಾ ಕೋಲ್ಚಾರ್ ಕಾರ್ಯಕ್ರಮ ನಿರೂಪಿಸಿದರು.