ಕಾರು ಪ್ರಯಾಣಿಕರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
ದ.ಕ. ಸಂಪಾಜೆ ಗ್ರಾಮದ ಗಡಿಕಲ್ಲು ಬಳಿ ಕಾರುಗಳ ನಡುವೆ ಭೀಕರ ಅಪಘಾತವಾಗಿ ಸವಾರರಿಗೆ ಗಂಭೀರ ಗಾಯವಾದ ಘಟನೆ ಇದೀಗ ನಡೆದಿದೆ. ಮಡಿಕೇರಿ ಕಡೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಕಾರೊಂದು ಸಂಪಾಜೆ ಗಡಿಕಲ್ಲು ಎಂಬಲ್ಲಿ ಮಸೀದಿ ಕಡೆಗೆ ತಿರುಗುವ ವೇಳೆಗೆ ಕಲ್ಲುಗುಂಡಿ ಯಿಂದ ಬರುತ್ತಿದ್ದ ಕಾರಿಗೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.
ಪರಿಣಾಮವಾಗಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರಿಗೆ ಗಂಭೀರ ಗಾಯವಾಗಿದ್ದು ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.