ಬಳ್ಪ ಗ್ರಾಮದ ಗುಂಡಾಜೆ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನವೀಕರಣ, ಪುನರ್ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವ ಹಾಗೂ ಪರಿವಾರ ದೈವಗಳ ನೇಮೋತ್ಸವವು ಡಿ. 31 ಮತ್ತು ಜ. 1ರಂದು ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಶ್ರೀ ಸುಬ್ರಹ್ಮಣ್ಯ ಬಳ್ಳಕ್ಕುರಾಯರ ನೇತೃತ್ವದಲ್ಲಿ, ಧರ್ಮಸ್ಥಳ ಡಾ. ವೀರೇಂದ್ರ ಹೆಗ್ಗಡೆಯವರ ಪೂರ್ಣಾಶೀರ್ವಾದದೊಂದಿಗೆ ವಾಸ್ತುತಜ್ಞ ಪ್ರಸಾದ ಮುನಿಯಂಗಳರವರ ಮಾರ್ಗದರ್ಶನದಲ್ಲಿ ನಡೆಯಲಿದೆ.
ಡಿ. 31ರಂದು ಪೂ. 9.00 ಗಂಟೆಗೆ ಹಸಿರು ಹೊರೆಕಾಣಿಕೆ ಪ್ರಾರಂಭ, ಉಗ್ರಾಣ ಮುಹೂರ್ತ ನಡೆದ ಬಳಿಕ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ ನಡೆಯಲಿದೆ. ಸಂಜೆ 6.00 ಗಂಟೆಯಿಂದ ಪ್ರಾರ್ಥನೆ, ವಿವಿಧ ವೈದಿಕ ಕಾರ್ಯಗಳು ನಡೆಯಲಿದೆ.
ಜ. 01ರಂದು ಬೆಳಿಗ್ಗೆ 7.00 ಗಂಟೆಯಿಂದ ಗಣಪತಿ ಹೋಮ, ಕಲಶ ಪೂಜೆ, ಪೂ. 9.44ರ ಕುಂಭ ಲಗ್ನದಲ್ಲಿ ದೇವರ ಹಾಗೂ ದೈವಗಳ ಪುನರ್ ಪ್ರತಿಷ್ಠೆ, ದುರ್ಗಾಹೋಮ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ 3.00ರಿಂದ ಯಕ್ಷ-ಕಲ್ಯಾಣ-ನಾಟ್ಯ-ಕಥಾ ನಡೆಯಲಿದೆ. ಸಂಜೆ ಭಜನಾ ಕಾರ್ಯಕ್ರಮದ ಬಳಿಕ ದೇವರಿಗೆ ರಂಗ ಪೂಜೆ, ಪ್ರಸಾದ ವಿತರಣೆ, ರಾತ್ರಿ 7.00 ಗಂಟೆಯಿಂದ ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ರಮಾನಂದ ಎಣ್ಣೆಮಜಲುರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಸೂರ್ಯನಾರಾಯಣ ಭಟ್ ಕಶೆಕೋಡಿ ಧಾರ್ಮಿಕ ಉಪನ್ಯಾಸ ನೀಡಿದ್ದಾರೆ. ಅನೇಕ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾತ್ರಿ 8.00 ಗಂಟೆಗೆ ದೈವಗಳ ಭಂಡಾರ ತೆಗೆದು ಅನ್ನಸಂತರ್ಪಣೆ ನಡೆದ ಬಳಿಕ ರಕ್ತೇಶ್ವರಿ, ಧೂಮಾವತಿ, ಪಂಜುರ್ಲಿ ಮತ್ತು ಗುಳಿಗ ದೈವಗಳ ನೇಮೋತ್ಸವ, ಪ್ರಸಾದ ವಿತರಣೆ ನಡೆಯಲಿದೆ.