ಸುಳ್ಯದಲ್ಲಿ ರಿಕ್ಷಾಕ್ಕೆ ಗುದ್ದಿದ ಬಸ್ : ನ್ಯಾಯಾಲಯದಲ್ಲಿ ಆರೋಪ ಸಾಬೀತು : ಶಿಕ್ಷೆ ಪ್ರಕಟ

0

ಸುಳ್ಯ ತಾಲೂಕು ಆಲೆಟ್ಟಿ ಗ್ರಾಮ ರಸ್ತೆಯಲ್ಲಿ ರಿಕ್ಷಾಕ್ಕೆ ಬಸ್ ಗುದ್ದಿದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಸಾಬೀತಾಗಿ ಬಸ್ ಚಾಲಕನಿಗೆ ನ್ಯಾಯಾಲಯ ಶಿಕ್ಷೆ ನೀಡಿರುವ ಘಟನೆ ವರದಿಯಾಗಿದೆ.

ಆರೋಪಿತ ಗೋಪಾಲರವರು ಬಸ್ಸಿನ‌ ಚಾಲಕರಾಗಿದ್ದು, ದಿ‌ನಾಂಕ 11.04.2023 ರಂದು ಬೆಳಿಗ್ಗೆ 10:30 ಗಂಟೆಗೆ ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ಮಾಣಿ ಮೈಸೂರು ಹೆದ್ದಾರಿ ರಸ್ತೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ಸನ್ನು ಅರಂತೋಡು ಕಡೆಯಿಂದ ಸುಳ್ಯ ಕಡೆಗೆ ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಜಾಲನೆ ಮಾಡುತ ತನ್ನ ಎದುರು ಸುಳ್ಯ ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾವನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸಿ ಆಟೋರಿಕ್ಷಾದ ಹಿಂಬದಿಯ ಬಲ ಬದಿಗೆ ಡಿಕ್ಕಿ ಪಡಿಸಿದ ಪರಿಣಾಮ ಆಟೋ ರಿಕ್ಷಾವು ಚಾಲನಾ ನಿಯಂತ್ರಣ ತಪ್ಪಿ ರಸ್ತೆಯ ಎಡಕ್ಕೆ ಚಲಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಷ್ಪಾವತಿಯವರ ಎಡಕಾಲಿನ ತೊಡೆಗೆ ಮತ್ತು ಕೋಲು ಕಾಲಿಗೆ ಸಾದ ಹಾಗೂ ತೀವ್ರ ಸ್ವರೂಪದ ಗಾಯವಾಗಿರುತ್ತದೆ.

ಹಿರಿಯ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ಬಿ.ಮೋಹನ್ ಬಾಬು ರವರ ಮುಂದೆ ಸದರಿ ಪ್ರಕರಣದ ವಿಚಾರಣೆ ನಡೆದು ಆರೋಪಿಯ ಅಪರಾಧ ಸಾಬೀತಾಗಿ ಅಪಾದಿತನನ್ನು 2024 ಡಿ‌.31ರಂದು ದೋಷಿ ಎಂದು ತೀರ್ಪು ನೀಡಿ ಶಿಕ್ಷೆ ಕೆಳಕಂಡಂತೆ ಪ್ರಟಿಸಿರುತ್ತಾರೆ.


ಕಲಂ 279 ರಡಿಯಲ್ಲಿ ಒಂದು ತಿಂಗಳ ಸಾದಾ ಕಾರಾಗೃಹ ವಾಸ ಮತ್ತು ₹1000/- ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ತಿಂಗಳ ಸಾದಾ ಕಾರಾಗೃಹ ವಾಸ, ಕಲಂ 337 ರಡಿಯಲ್ಲಿ ಒಂದು ತಿಂಗಳ ಸಾದಾ ಕಾರಾಗೃಹ ವಾಸ ಮತ್ತು ₹500 ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ತಿಂಗಳ ಸಾದಾ ಕಾರಾಗೃಹ ವಾಸ, ಕಲಂ 338 ರಡಿಯಲ್ಲಿ ಆರು ತಿಂಗಳ ಸಾದಾ ಕಾರಾಗೃಹ ವಾಸ ಮತ್ತು ₹1000 ದಂಡ, ದಂಡ ಕಟ್ಟದಿದ್ದರೆ 2 ತಿಂಗಳು ಸಾದಾ ಕಾರಾಗೃಹ ಶಿಕ್ಷೆ. ಎಲ್ಲಾ ಶಿಕ್ಷೆಗಳು ಏಕಕಾಲಕ್ಕೆ ಜಾರಿಯಾಗಲಿದೆ. ಸರ್ಕಾರದ ಪರವಾಗಿ ಪ್ರಕರಣವನ್ನು ಮಾನ್ಯ ಸಹಾಯಕ ಸರ್ಕಾರಿ ಅಭಿಯೋಜಕರು ನಡೆಸಿ ವಾದ ಮಂಡಿಸಿರುತ್ತಾರೆ.