ಇಂದಿನಿಂದ(ಜ.1-7)ಕೇರ್ಪಡ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ

0

ಇಂದು ಸಂಜೆ ಕ್ಷೇತ್ರದ ತಂತ್ರಿಗಳ ಆಗಮನ- ವೈದಿಕ ಕಾರ್ಯಕ್ರಮ- ಧಾರ್ಮಿಕ ಸಭೆ

ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರಿಂದ ಆಶೀರ್ವಚನ- ಗಣ್ಯರ ಆಗಮನ

ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನೀ ದೇವಾಲಯದಲ್ಲಿ ಜ.1ರಿಂದ 7ರ ತನಕ ಅಷ್ಟಬಂಧ ಬ್ರಹ್ಮಕಲಶೋತ್ಸವ ಜರುಗಲಿದೆ.

ಇಂದು ಸಂಜೆ ಕ್ಷೇತ್ರದ ತಂತ್ರಿಗಳ ಆಗಮನವಾಗಿ ವಿವಿಧ ವೈದಿಕ ಕಾರ್ಯಕ್ರಮ ನಡೆಯಲಿದೆ.ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಕಾಸರಗೋಡು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರಿಂದ ಆಶೀರ್ವಚನ ನಡೆಯಲಿದೆ.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಬ್ರಹ್ಮಶ್ರೀ ರವೀಶ ತಂತ್ರಿಗಳು ಕುಂಟಾರು ಇವರಿಂದ ಧಾರ್ಮಿಕ ಉಪನ್ಯಾಸ ನಡೆಯಲಿದ್ದು, ಬ್ರಹ್ಮಶ್ರೀ ನಾಗೇಶ ತಂತ್ರಿಗಳು ಕೆಮ್ಮಿಂಜೆ ಹಾಗೂ ಗಣ್ಯರು ಉಪಸ್ಥಿತರಿರುವರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗಾನ ನೃತ್ಯ ವೈಭವ, ನೃತ್ಯಾರ್ಪಣಂ ನಡೆಯಲಿದೆ.

ಜ.2ರಂದು ಬೆಳಿಗ್ಗೆ ವಿವಿಧ ವೈದಿಕ ಕಾರ್ಯಕ್ರಮದ ಬಳಿಕ ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ ಕಾರ್ಯಕ್ರಮ ನಡೆಯಲಿದ್ದು ಉಡುಪಿ ಶ್ರೀ ಕಾಣಿಯೂರು ರಾಮತೀರ್ಥ ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಬ್ರಹ್ಮಶ್ರೀ ಕಾರ್ತಿಕ್ ತಂತ್ರಿಗಳು, ಕೆಮ್ಮಿಂಜೆ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.


ಸಾಂಸ್ಕೃತಿಕ ಕಾರ್ಯಕ್ರಮದ
ಅಂಗವಾಗಿ ಹರಿ ಕಥಾ ಕಾಲಕ್ಷೇಪ, ಮ್ಯಾಜಿಕ್ ಶೋ, ಮಿಮಿಕ್ರಿ ಮತ್ತು ಜಗ್ಲಿಂಗ್ ಶೋ ನಡೆಯಲಿದೆ.
ಜ.3 ರಂದು ಬೆಳಿಗ್ಗೆ ವಿವಿಧ ವೈದಿಕ ಕಾರ್ಯಕ್ರಮಗಳ ಬಳಿಕ ಸಂಜೆ 5.30ರಿಂದ ವೈದಿಕ ಕಾರ್ಯಕ್ರಮಗಳು, ಸಂಜೆ 6 ರಿಂದ ಪವಿತ್ರ ತೀರ್ಥಕೆರೆ ಮತ್ತು ತೀರ್ಥಬಾವಿ ಲೋಕರ್ಪಣೆ, ಗಂಗಾ ಪೂಜೆ, ದೀಪೋತ್ಸವ ಮತ್ತು ಗೋಪೂಜೆ ಜರುಗಲಿದೆ. ಬಳಿಕ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು ಶ್ರೀ ಒಡಿಯೂರು ಕ್ಷೇತ್ರದ ಸಾದ್ವಿ ಶ್ರೀ ಮಾತಾನಂದಮಯಿ ಅಶೀರ್ಚನ ನೀಡಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ ಸಭಾಧ್ಯಕ್ಷತೆ ವಹಿಸಲಿದ್ದು, ಖ್ಯಾತ ವಾಗ್ಮಿ ಕು.ಹಾರಿಕಾ ಮಂಜುನಾಥ್ ಧಾರ್ಮಿಕ ಉಪನ್ಯಾಸ ನೀಡಲಿದ್ದು ರಾಜ್ಯ ಸಚಿವೆ ಕು.ಶೋಭಾ ಕರಂದ್ಲಾಜೆ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.


ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ನೃತ್ಯ ಸಂಭ್ರಮ, ನೃತ್ಯೋಲ್ಲಾಸ ನಡೆಯಲಿದೆ.
ಜ.4 ಬೆಳಿಗ್ಗೆ ವೈದಿಕ ಕಾರ್ಯಕ್ರಮ ನಡೆಯಲಿದ್ದು,ಸಂಜೆ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವನ ನೀಡಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ್ ಭಟ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.ಸಂಸದ ಕ್ಯಾ.ಬ್ರಿಜೇಶ್ ಚೌಟ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶಾಂಭವಿ ವಿಲಾಸ ಯಕ್ಷಗಾನ ನಡೆಯಲಿದೆ.

ಜ.5 ಬೆಳಿಗ್ಗೆ ವಿವಿಧ ವೈದಿಕ ಕಾರ್ಯಕ್ರಮ ನಡೆದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಪದ್ಮವಿಭೂಷಣ ಡಾ|ವೀರೇಂದ್ರ ಹೆಗ್ಗಡೆಯವರು ಶುಭಾಶಂಸನೆ ನೀಡಲಿದ್ದಾರೆ. ಶ್ರೀ ಮಹಾಲಕ್ಷ್ಮಿ ಸಂಸ್ಥಾನ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹಾಗೂ ಶ್ರೀ ಜಗದ್ಗುರು ರಾಘವೇಂದ್ರಪೀಠ ಮೂಡಬಿದ್ರೆ ಯ ಶ್ರೀ ಮುಕ್ತಾನಂದ ಸ್ವಾಮೀಜಿ ಇವರುಗಳು ಆಶೀರ್ವಚನ ನೀಡಲಿದ್ದಾರೆ.


ಸರಸ್ವತಿ ವಿದ್ಯಾಲಯ ನರಿಮೊಗರು ಇದರ ಆಧ್ಯಕ್ಷ ಅವಿನಾಶ್ ಕೊಡೆಂಕಿರಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನೃತ್ಯಾರ್ಪಣಂ ನಡೆಯಲಿದೆ.

ಜ.6 ರಂದು ಬೆಳಿಗ್ಗೆ 8.23ರಿಂದ ಮಕರ ಲಗ್ನದ ಶುಭ ಮುಹೂರ್ತದಲ್ಲಿ ಶ್ರೀ ಮಹಿಷಮರ್ದಿನಿ ದೇವರಿಗೆ ಅಷ್ಟಬಂಧಕ್ರಿಯೆ, ಬ್ರಹ್ಮಕಲಶಾಭಿಷೇಕ, ಮಧ್ಯಾಹ್ನ ಚಂಡಿಕಾ ಹೋಮದ ಪೂರ್ಣಾಹುತಿ, ದೊಡ್ಡ ರಂಗ ಪೂಜೆ, ಬೆಡಿ ಪ್ರದರ್ಶನ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ನಡೆಯಲಿದೆ.

ಜ.7 ರಂದು ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾತ್ರಿ ರಕ್ತೇಶ್ವರೀ ಮತ್ತು ಪರಿವಾರ ದೈವಗಳಾದ ಪಂಜುರ್ಲಿ, ಮಹಿಷಂತಾಯ ಮತ್ತು ಗುಳಿಗ ದೈವಗಳಿಗೆ ನೇಮೋತ್ಸವ ಜರುಗಲಿದೆ.
ಪ್ರತಿದಿನ ಸಂಜೆ 6ಕ್ಕೆ ಭಜನಾ ಕಾರ್ಯಕ್ರಮ ನಡೆಯಲಿದೆ.