ಅಧ್ಯಯನ -ಅಧ್ಯಾಪನ ಉಪನ್ಯಾಸ ಹಾಗೂ ಶಿಕ್ಷಕರೊಂದಿಗೆ ಸಂವಾದ ಕಾರ್ಯಕ್ರಮ
ಪಬ್ಲಿಕ್ ಸ್ಕೂಲ್ ಬೆಳ್ಳಾರೆ ವಸಂತ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ಅಧ್ಯಯನ ಅಧ್ಯಾಪನ ಶಿಕ್ಷಕರೊಂದಿಗೆ ಸಂವಾದ ಕಾರ್ಯಕ್ರಮವು ಜ.02 ರಂದು ನಡೆಯಿತು.
ಮೈಸೂರು ಸೈಂಟ್ ಫಿಲೋಮಿನಾ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರು,ಖ್ಯಾತ ಚಿಂತಕರಾದ ಪ್ರೊ.ಎಂ.ಕೃಷ್ಣೇ ಗೌಡರವರು ಉಪನ್ಯಾಸ ನೀಡಿದರು.
ನಿವೃತ್ತ ಪ್ರಾಂಶುಪಾಲ ಸೂರ್ಯನಾರಾಯಣ ಬಿ.ವಿ.ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ವಸಂತ ಸಂಭ್ರಮ ಸಮಿತಿ ಗೌರವಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಚಾಲಕ ಎಸ್.ಎನ್.ಮನ್ಮಥ,ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್.ರೈ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲಾ, ಅಕ್ಷರ ದಾಸೋಹ ತಾಲೂಕು ಸಂಯೋಜಕಿ ಶ್ರೀಮತಿ ವೀಣಾ,ಶಾಲಾ ಎಸ್.ಡಿ.ಎಂ.ಸಿ .ಉಪಾಧ್ಯಕ್ಷ ಶ್ರೀನಾಥ ರೈ ಬಾಳಿಲ, ಪ್ರೌಢ ಶಾಲಾ ಉಪಪ್ರಾಂಶುಪಾಲೆ ಶ್ರೀಮತಿ ಉಮಾಕುಮಾರಿ ,ಪ್ರಾಥಮಿಕ ಶಾಲಾ ಮುಖ್ಯ ಗುರು ಮಾಯಿಲಪ್ಪ ಜಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಮೊದಲು ಕೃಷ್ಣೇ ಗೌಡರವರನ್ನು ಶಾಲು ಹೊದಿಸಿ,ಫಲ,ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ವಸಂತ ಸಂಭ್ರಮ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ರೈ ಪನ್ನೆ ಕೃಷ್ಣೇ ಗೌಡರವರ ಪರಿಚಯ ಮಾಡಿದರು.
ಕಾಲೇಜಿನ ಪ್ರಾಂಶುಪಾಲ ಜನಾರ್ಧನ ಎನ್.ಸ್ವಾಗತಿಸಿ, ವಿದ್ಯಾರ್ಥಿಗಳು ಪ್ರಾರ್ಥಿಸಿ,ಶಿಕ್ಷಕಿ ಶ್ರೀಲತಾ ಕಾರ್ಯಕ್ರಮ ನಿರೂಪಿಸಿದರು.