ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಸೋಣಂಗೇರಿ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

0

ಬ್ಯಾಂಕ್ ಆಫ್ ಬರೋಡದಿಂದ ಪ್ರವರ್ತಿಸಲ್ಪಟ್ಟ ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇವರು ಅಂಗನವಾಡಿ ಸೋಣಂಗೇರಿ ಅಂಗನವಾಡಿ ಮಕ್ಕಳಿಗೆ ಕೊಡಲ್ಪಟ್ಟ
ಸಮವಸ್ತ್ರವನ್ನು ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸುರು ಇದರ ಆಶ್ರಯದಲ್ಲಿ ವಿತರಣೆ ಕಾರ್ಯಕ್ರಮ ಜ. 2 ರಂದು ಸ.ಉ.ಹಿ.ಪ್ರಾ.ಶಾಲೆ ಸೋಣಂಗೇರಿ ಇಲ್ಲಿ ನಡೆಯಿತು.

ಶಿಶು ಅಭಿವೃದ್ಧಿ ಮಹಿಳಾ ಮೇಲ್ವಿಚಾರಕಿ ಶ್ರೀಮತಿ ಉಷಾ ರೈ ಕಾರ್ಯಕ್ರಮ ಉದ್ಘಾಟಿಸಿದರು.

ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಇದರ ಸಿಇಓ ವಿಶ್ವನಾಥ್ ರೈ ಮಕ್ಕಳಿಗೆ ಪ್ರತಿಷ್ಠಾನದ ವತಿಯಿಂದ ಕೊಡಲ್ಪಟ್ಟ ಸಮವಸ್ತ್ರ ವಿತರಿಸಿ ಶುಭ ಹಾರೈಸಿದರು.

ಜಾಲ್ಲೂರು ವಿಜಯ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಯಶ್ವಿತ್ ಕಾಳಂಮನೆ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಬ್ಯಾಂಕ್ ಆಫ್ ಬರೋಡ ಅಧಿಕಾರಿ ಶ್ರೀಮತಿ ಸುಗುಣಾವತಿ, ಗ್ರಾಮ ಪಂಚಾಯತ್ ಸದಸ್ಯ ಈಶ್ವರ್ ನಾಯ್ಕ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಚಿದಾನಂದ, ಮುಖ್ಯ ಶಿಕ್ಷಕಿ ಶ್ರೀಮತಿ ಕುಸುಮಾವತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ರವಿಕಲಾ,
ಕಾರ್ಯಕ್ರಮ ಸಂಯೋಜಕರಾದ
ಗಣೇಶ್ ರೈ ಕುಕ್ಕಂದೂರು, ಶ್ರೀಮತಿ ಸುಮತಿ ಹುಲಿಮನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದೇ ಸಂದರ್ಭ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ರೈಯವರನ್ನು ಬಾಲ ವಿಕಾಸ ಸಮಿತಿ, ಅಂಗನವಾಡಿ ವತಿಯಿಂದ ಸನ್ಮಾನಿಸಲಾಯಿತು.

ಶಿಕ್ಷಕಿ ಸವಿತಾ ಕಾರ್ಯಕ್ರಮ ನಿರೂಪಿಸಿದರು.