ಜಾಗ ಅತಿಕ್ರಮಣ ಮಾಡಿರುವ ಆರೋಪ

0

ರಾತ್ರಿಯಾದರೂ ತೆರಳದೆ ತಾಲೂಕು ಕಚೇರಿಯಲ್ಲಿ ಪ್ರತಿಭಟನೆಗೆ ಕುಳಿತ ದಲಿತ ಕುಟುಂಬ

ನ್ಯಾಯ ಸಿಗದೇ ಇಲ್ಲಿಂದ ತೆರಳುವುದಿಲ್ಲ ಎಂದು ಪಟ್ಟು

ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಮುಖಂಡರುಗಳು ಭಾಗಿ

ಪಂಬೆತ್ತಾಡಿ ಗ್ರಾಮದ, ಪಲಶಿಷ್ಟ ಜಾತಿಗೆ ಸೇರಿದ ಚಂರ್ಬ ಮೇರ ಎಂಬವರ ಜಮೀನನ್ನು ಸ್ಥಳೀಯ ನಿವಾಸಿ ಮೋನಪ್ಪ ಗೌಡ ಮತ್ತು ಇತರರು ಅಕ್ರಮವಾಗಿ ಮಂಜೂರುಗೊಳಿಸಿ ಬಡ ದಲಿತ ಕುಟುಂಬಕ್ಕೆ ಅನ್ಯಾಯವೆಸಗಿದ್ದಾರೆ ಎಂದು ಆರೋಪಿಸಿ ಜ. 2 ರಂದು ಸುಳ್ಯ ತಾಲೂಕು ಕಚೇರಿ ಆವರಣದಲ್ಲಿ ದಲಿತ ಕುಟುಂಬದ ಸದಸ್ಯರು ಮತ್ತು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಮುಖಂಡರುಗಳು ಪ್ರತಿಭಟನೆಗೆ ಕುಳಿತುಕೊಂಡ ಘಟನೆ ವರದಿಯಾಗಿದೆ.

ಈ ಮೊದಲು ಇದೇ ಘಟನೆಗೆ ಸಂಭಂದಿಸಿ ನ. 30 ರಂದು ತಾಲೂಕು ಕಚೇರಿ ಮುಂಭಾಗ ಪ್ರತಿಭಟನಾ ಸಭೆಯನ್ನು ಹಮ್ಮಿಕೊಂಡಿದ್ದರು

.

ಸಭೆಯಲ್ಲಿ ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕರಿಕ್ಕಳ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ್, ಕಾರ್ಯದರ್ಶಿ ಪಿ ಎಸ್ ಗಂಗಾಧರ್ ಮೊದಲಾದವರು ಭಾಗವಹಿಸಿದ್ದರು.

ಅಂದು ಪ್ರತಿಭಟನಾ ಸಭೆಯ ಅಧ್ಯಕ್ಷತೆಯನ್ನು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ರಾಜ್ಯಧ್ಯಕ್ಷ ಗಿರಿಧರ ನಾಯ್ಕ ರವರು ವಹಿಸಿದ್ದರು.
ಬಳಿಕ ಪ್ರತಿಭಟನಾ ಸ್ಥಳಕ್ಕೆ ಸುಳ್ಯ ತಹಶೀಲ್ದಾರರು ಬಂದು ಬೇಡಿಕೆಯ ಮನವಿ ಸ್ವೀಕರಿಸಿ ಈ ಪ್ರಕರಣ ರಾಜ್ಯ ಹೈ ಕೋರ್ಟ್ ನಲ್ಲಿ ಇದ್ದು ನಾವು ಕೋರ್ಟ್ ಉಲ್ಲಂಘನೆ ಮಾಡಲು ಸಾಧ್ಯವಿಲ್ಲ. ಆದ್ದರಿಂದ ನ್ಯಾಯಾಲಯಕ್ಕೆ ತೆರಳಿ ತಮ್ಮ ಕೋರಿಕೆ ಮತ್ತು ಮನವಿಯನ್ನು ಕಾನೂನು ಪ್ರಕಾರ ಸಲ್ಲಿಸುವಂತೆ ತಿಳಿಸಿದರು.

ಬಳಿಕ ಸ್ಥಳದಲ್ಲಿದ್ದ ಮುಖಂಡರುಗಳಾದ ಪಿ ಸಿ ಜಯರಾಮ್ ಹಾಗೂ ಪಿ ಎಸ್ ಗಂಗಾಧರ ರವರು ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿ ಜಾಗದ ಸರ್ವೆ ಕಾರ್ಯವನ್ನು ಆದಷ್ಟು ಶೀಘ್ರದಲ್ಲಿ ನಡೆಸಿ ಗೊಂದಲ ಸರಿ ಪಡಿಸಿ ಕೊಡುವಂತೆ ಕೇಳಿಕೊಂಡರು.


ಇದಕ್ಕೆ ಒಪ್ಪಿಗೆ ಸೂಚಿಸಿದ ತಹಶೀಲ್ದಾರ್ ಮಂಜುಳಾ ರವರು 15 ದಿನಗಳಲ್ಲಿ ಸರ್ವೆ ನಡೆಸಲು ಕಂದಾಯ ಇಲಾಖೆಯವರಿಗೆ ಸೂಚನೆ ನೀಡುವ ಕುರಿತು ಭರವಸೆ ನೀಡಿದರು.


ಆ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ಈ ಹೇಳಿದ ಪ್ರಕಾರ ಅಧಿಕಾರಿಗಳು ನಡೆಯದಿದ್ದರೆ ಸುಳ್ಯ ತಾಲೂಕು ಕಛೇರಿ ಮುಂಭಾಗ ನಿರಂತರವಾಗಿ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಕರ್ನಾಟಕ ಇದರ ವತಿಯಿಂದ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದ್ದರು.

ಆದರೆ ಇದೀಗ ಒಂದು ತಿಂಗಳು ಕಳೆದರೂ ಅಧಿಕಾರಿಗಳು ಯಾವುದೇ ಕ್ರಮ ಕೈ ಗೊಳ್ಳಲಿಲ್ಲ ಎಂದು ಇಂದು ಬೆಳಿಗ್ಗೆ ಯಿಂದ ಮಧ್ಯಾಹ್ನವರೆಗೆ ಜಾಗದ ಬಳಿ ಕುಳಿತು ಪ್ರತಿಭಟನೆ ಮಾಡಿದ್ದು ಅದು ವರೆಗೆ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಬರಲಿಲ್ಲ ಎಂದು ಇಡೀ ಕುಟುಂಬದ ಸದಸ್ಯರು ತಾಲೂಕು ಕಚೇರಿ ಗೆ ಬಂದಿದ್ದು ನ್ಯಾಯ ಸಿಗದೇ ಇಲ್ಲಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದು ಪ್ರತಿಭಟನೆಗೆ ಕುಳಿತುಕೊಂಡರು.

ಪ್ರತಿಭಟನೆಯಲ್ಲಿ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷ ಗಿರಿಧರ್ ನಾಯ್ಕ,ಕಾರ್ಯದರ್ಶಿ ಪ್ರಮೋದ್ ತಿಂಗಳಾಡಿ,ಪುತ್ತೂರು ಜಿಲ್ಲಾ ಸಮಿತಿ ಅಧ್ಯಕ್ಷ ನಂದಕುಮಾರ್
ಸ್ಥಳದ ಕುಟುಂಬ ಸದಸ್ಯರುಗಳಾದ ಅಕ್ಕು, ಗಿರಿಜಾ, , ಲಲಿತಾ, ನಾಗಶ್ರೀ ತಿಮ್ಮಕ್ಕ, ಸುಂದರಿ, ಸದಾನಂದ, ಹಾಗೂ ಇತರ ಸದಸ್ಯರುಗಳು ಭಾಗವಹಿಸಿದ್ದರು.
ಸ್ಥಳಕ್ಕೆ ತಹಶೀಲ್ದಾರ್ ಮಂಜುಳಾರವರು,ಸುಳ್ಯ ಪೊಲೀಸರು ಆಗಮಿಸಿ ಪ್ರತಿಭಟನಾ ಕಾರರನ್ನು ಮನವೊಲಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ.