ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರುವಾಜೆಯ ಶಾಲಾ ವಾರ್ಷಿಕೋತ್ಸವವನ್ನು ಭಾವೈಕ್ಯ ಯುವಕ ಮಂಡಲ ಪೆರುವಾಜೆ, ಭಾವೈಕ್ಯ ಮಹಿಳಾ ಮಂಡಲ ಪೆರುವಾಜೆ, ಭಾವೈಕ್ಯ ಚಿಗುರು ವೇದಿಕೆ ಪೆರುವಾಜೆ ಮೊದಲಾದ ಸಂಘ ಸಂಸ್ಥೆಗಳ ಜೊತೆಗೂಡಿ ಜ.2 ರಂದು ಆಚರಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ವಿಜಯಕುಮಾರ್ ಶಾಲಾ ಧ್ವಜಾರೋಹಣ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಗನ್ನಾಥ ಪೂಜಾರಿ ಮುಕ್ಕೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯೋಪಾಧ್ಯಾಯರಾದ ಶ್ರೀಮತಿ ಶೃತಿ ವಾರ್ಷಿಕ ವರದಿ ವಾಚನ ಮಾಡಿದರು. ಈರಯ್ಯ ಡಿ.ಎನ್ ಬೆಳ್ಳಾರೆ ಪೋಲೀಸ್ ಠಾಣೆ ಪೋಲಿಸ್ ಉಪನಿರೀಕ್ಷಕರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ರಾಜೀವಿ ರೈ ಪುಡ್ಕಜೆ ಕಾರ್ಯಕ್ರಮಕ್ಕೆ ಶುಭಕೋರಿದರು. ವಿದ್ಯಾರ್ಥಿಗಳಿಗೆ ದತ್ತಿ ನಿಧಿ ಹಾಗೂ ಬಹುಮಾನಗಳನ್ನು ವಿತರಣೆ ಮಾಡಲಾಯಿತು. ಮಕ್ಕಳಿಂದ ಮನೋರಂಜನಾ ಕಾರ್ಯಕ್ರಮಗಳು ನಡೆದವು.
ಈ ಸಂದರ್ಭದಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಶಹಿನಾಝ್, ಪೆರುವಾಜೆ ಗ್ರಾಮ ಪಂಚಾಯತ್ ನ ಸದಸ್ಯರಾದ ಪದ್ಮನಾಭ ಶೆಟ್ಟಿ, ಮಾಧವ , ರೇವತಿ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶ್ರೀಮತಿ ಆಶಾ, ಶಿಕ್ಷಣ ಸಂಯೋಜಕರಾದ ಶ್ರೀಮತಿ ಸಂಧ್ಯಾ ಕುಮಾರಿ, ಶಿಕ್ಷಣ ಸಂಯೋಜಕಿಯಾದ ಶ್ರೀಮತಿ ಧನಲಕ್ಷ್ಮಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸುಳ್ಯ ತಾಲೂಕಿನ ಮೇಲ್ವಿಚಾರಕರಾದ ಶ್ರೀಮತಿ ವಿಶಾಲ ಕೆ , ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ ಉಮೇಶ್, ಭಾವೈಕ್ಯ ಯುವಕ ಮಂಡಲದ ಅಧ್ಯಕ್ಷರಾದ ರಜನೀಶ್ ಪಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ರಂಜಿತಾ, ವಿದ್ಯಾರ್ಥಿ ನಾಯಕ ಮಾಸ್ಟರ್ ಲೆನ್ ಡಿಸೋಜ , ಎಸ್ .ಡಿ .ಎಂ .ಸಿ ಸದಸ್ಯರು, ಪೋಷಕರು , ಅಡುಗೆ ಸಿಬ್ಬಂದಿಗಳು , ಭಾವೈಕ್ಯ ಯುವಕ ಮಂಡಲದ ಸದಸ್ಯರು , ಭಾವೈಕ್ಯ ಮಹಿಳಾ ಮಂಡಲದ ಸದಸ್ಯರು, ಭಾವೈಕ್ಯ ಚಿಗುರು ವೇದಿಕೆ ಸದಸ್ಯರು ಉಪಸ್ಥಿತರಿದ್ದರು.