ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

0


ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಂಭ್ರಮ ಜ.2 ರಂದು ನಡೆಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿಮಲಾನಿಲ್ ಕನ್ಸಲ್ಟೆನ್ಸಿ ಹಾಗೂ ಕ್ಯಾಡ್ ಸೆಂಟರ್ ಮಂಗಳೂರು ಇಲ್ಲಿನ ನಿರ್ವಹಣಾ ನಿರ್ದೇಶಕರಾದ ಅನಿಲ್ ಹೆಗ್ಡೆ ಕೆ. ಅವರು ಆಗಮಿಸಿದ್ದರು.

ಸಭಾಧ್ಯಕ್ಷತೆಯನ್ನು ಶಾಲಾ ಸ್ಥಾಪಕಾಧ್ಯಕ್ಷರಾದ ರುಕ್ಮಯದಾಸ್ ಇವರು ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಕಿಶೋರ್ ಕುಮಾರ್ ಅವರು ಸ್ವಾಗತಿಸಿದರು. ಪ್ರಾಂಶುಪಾಲರಾದ ಶ್ರೀಮತಿ ಶೋಭ ಕಿಶೋರ್ ಶಾಲಾ ವಾರ್ಷಿಕ ವರದಿಯನ್ನು ವಾಚಿಸಿದರು.

ಮುಖ್ಯ ಅತಿಥಿಗಳಾದ ಅನಿಲ್ ಕುಮಾರ್ ಹೆಗಡೆಯವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಅತಿಥಿಗಳು ಮಾತನಾಡಿ ಗೂನಡ್ಕ ಎಂಬ ಗ್ರಾಮೀಣ ಪ್ರದೇಶದಲ್ಲಿ ಅಂತರಾಷ್ಟ್ರೀಯ ಮಾನ್ಯತೆ ಪಡೆದು ಮಕ್ಕಳಲ್ಲಿ ಸರ್ವತೋಮುಖ ಬೆಳವಣಿಗೆ ತರುವಲ್ಲಿ ಯಶಸ್ವಿಯಾಗಿರುವ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಇದರ ಅಧ್ಯಕ್ಷರಾದ ರುಕ್ಮಯ್ಯದಾಸ್ ಹಾಗೂ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರನ್ನು ಶ್ಲಾಘಿಸಿದರು. “ಪೋಷಕರು ತಮ್ಮ ಮಕ್ಕಳನ್ನು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸುವುದು ಹಾಗೂ ಮುಂದಿನ ವೃತ್ತಿಪರ ಪದವಿಗಳಲ್ಲಿ ತಮ್ಮ ಮಕ್ಕಳ ಆಸಕ್ತಿಗೆ ಪ್ರಾಮುಖ್ಯತೆ ನೀಡಬೇಕೆಂದು ಅವರು ಹೇಳಿದರು.

ಸಂಭ್ರಮದ ಸಲುವಾಗಿ ವಿದ್ಯಾರ್ಥಿಗಳಿಗೆ ನಡೆಸಿದ್ದ ವಿವಿಧ ಸ್ಪರ್ಧೆಗಳ ಬಹುಮಾನವನ್ನು ಹಾಗೂ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ನಡೆದ ಕ್ರೀಡಾ ಚಟುವಟಿಕೆಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳು ಪಡೆದ ಬಹುಮಾನಗಳು, ಪ್ರತಿ ತರಗತಿಯ ಕಲಿಕೆಯ ಪ್ರಥಮ ಸ್ಥಾನದ ಬಹುಮಾನ, CISCE ಬೋರ್ಡ್ ನಿಂದ ನಡೆಸಲ್ಪಡುವ ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಸ್ಥಾನಗಳನ್ನು ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಡಾಕ್ಟರೇಟ್ ಪದವಿ ಪಡೆದ ಶಾಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ. ಕಿಶೋರ್ ಕುಮಾರ್ ಅವರನ್ನು ಎಲ್ಲಾ ಸಿಬ್ಬಂದಿ ವರ್ಗದವರ ವತಿಯಿಂದ ಗೌರವಿಸಲಾಯಿತು.
ಸಭಾಧ್ಯಕ್ಷರಾದ ರುಕ್ಮಯ್ಯ ದಾಸ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಸೋಮಶೇಖರ ಕೊಯಿಂಗಾಜೆ , ಶಾಲಾ ಆಡಳಿತ ಮಂಡಳಿಯ ನಿರ್ದೇಶಕರಾದ ಶ್ರೀಮತಿ ಲೀಲಾವತಿ ರುಕ್ಮಯದಾಸ್ ಪೋಷಕರ ಸಂಘದ ಅಧ್ಯಕ್ಷರಾದ ರಮೇಶ್ ಹೆಚ್, ಉಪಾಧ್ಯಕ್ಷರಾದ ಸಿ ಎ ಗಿರೀಶ್ ಮೊದಲಾದವರು ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲರಾದ ಶ್ರೀಮತಿ ಪುನೀತ ವಂದಿಸಿದರು.

ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ಶೈಲಿಯ ನೃತ್ಯಗಳು ಫ್ಯಾಶನ್ ಶೋ ಕರಾಟೆ ಯೋಗ ಹೀಗೆ ಸುಮಾರು 35 ವಿಭಿನ್ನ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಗಾಯಕ ಕೃಷ್ಣರಾಜ ಕೇರ್ಪಳ ಪ್ರೇಕ್ಷಕರನ್ನು ತಮ್ಮ ಹಾಡಿನ ಹಾಗೂ ಮಾತಿನ ಮೋಡಿಯ ಮೂಲಕ ರಂಜಿಸಿದರು.
ಸಹ ಶಿಕ್ಷಕರಾದ ಧನ್ ರಾಜ್ ಎಲ್ಲಾ ಕಾರ್ಯಕ್ರಮಗಳ ನಿರೂಪಣೆಗೈದರು.