ಮಂಜೇಶ್ವರ ಶಾರದಾ ಆರ್ಟ್ಸ್ ಕಲಾವಿದರಿಂದ “ಕಥೆ ಎಡ್ಡೆಂಡು” ತುಳು ನಾಟಕ ಪ್ರದರ್ಶನ
ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವದ ಅಂಗವಾಗಿ ಶ್ರೀ ಚೆನ್ನಕೇಶವ ಕಲಾ ಮತ್ತು ಸಾಂಸ್ಕೃತಿಕ ಸಂಘದ ಆಶ್ರಯದಲ್ಲಿ ಜ.6 ರಂದು ಸಂಜೆ ದೇವಸ್ಥಾನದ ಮುಂಭಾಗದ ಕಲಾ ವೇದಿಕೆಯಲ್ಲಿ ಸ್ಥಳೀಯ ಭಜಕರಿಂದ ಭಜನಾ ಸಂಕೀರ್ತನೆ ಹಾಗೂ ಆಕರ್ಷಕ ಕುಣಿತ ಭಜನಾ ಕಾರ್ಯಕ್ರಮವು ನಡೆಯಲಿರುವುದು.
ರಾತ್ರಿ ಸಾಂಸ್ಕೃತಿಕ
ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ನಡೆಯಲಿದೆ. ದೇವಸ್ಥಾನದ ಅನುವಂಶಿಕ ಮೊಕ್ತೇಸರ ರಾದ ಡಾ.ಹರಪ್ರಸಾದ್ ತುದಿಯಡ್ಕ ದೀಪ ಪ್ರಜ್ವಲಿಸಿರುವರು. ಎ.ಒ.ಎಲ್.ಇ ಅಧ್ಯಕ್ಷರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ ಚಿದಾನಂದ, ನ.ಪಂ.ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಹಿರಿಯ ಉದ್ಯಮಿ ಕೃಷ್ಣ ಕಾಮತ್ ಅರಂಬೂರು, ಕಲ್ಕುಡ ದೈವಸ್ಥಾನದ ಆಡಳಿತ ಧರ್ಮದರ್ಶಿ ಪಿ.ಕೆ.ಉಮೇಶ,ತಾಲೂಕು ಭಜನಾ ಪರಿಷತ್ ಗೌರವಾಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ, ವಿ.ಹೆಚ್.ಪಿ. ಅಧ್ಯಕ್ಷ ಸೋಮಶೇಖರ ಪೈಕ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.
ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದ ಪ್ರಯುಕ್ತ ಸುಳ್ಯದಲ್ಲಿ ಪ್ರಥಮ ಬಾರಿಗೆ ಶಾರದಾ ಆರ್ಟ್ಸ್ ಕಲಾವಿದರು ಮಂಜೇಶ್ವರ ಅಭಿನಯದ ಕಥೆ ಎಡ್ಡೆಂಡು ತುಳು ನಾಟಕ ಪ್ರದರ್ಶನವಾಗಲಿರುವುದು ಎಂದು ಸಂಘದ ಸಂಚಾಲಕ ಜಯಂತ ಶೇಟ್ ತಿಳಿಸಿರುತ್ತಾರೆ.