ಶಾಲಾ ಶಿಕ್ಷಣ ಇಲಾಖೆ ಪಿಎಮ್‌ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು, ಹಿರಿಯ ವಿದ್ಯಾರ್ಥಿ ಸಂಘ ಮತ್ತು ಅಂಗನವಾಡಿ ಕೇಂದ್ರ ಗುತ್ತಿಗಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಜನವರಿ ೪ ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಶಾಲಾ ಅಭಿವೃದ್ಧಿ ಕಾಮಗಾರಿಗಳನ್ನು ಹಾಗೂ ಸಭಾ ಕಾರ್ಯಕ್ರಮವನ್ನು ಶಾಸಕಿ ಕು. ಭಾಗಿರಥಿ ಮುರುಳ್ಯ ಉದ್ಘಾಟಿಸಿ ಮಾತನಾಡಿ, ಈಗಾಗಲೇ ಕ್ರೀಡಾಂಗಣ ಅಭಿವೃದ್ಧಿಗೆ ೫ ಲಕ್ಷ ಅನುದಾನವನ್ನು ಇರಿಸಲಾಗಿದೆ. ಇನ್ನು ಮುಂದಿನ ದಿನಗಳಲ್ಲಿ ಶಾಲೆಯ ಮೂಲಭೂತ ಸೌಕರ್ಯಗಳನ್ನು ಹಂತ ಹಂತವಾಗಿ ಪೂರೈಸಲಾಗುವುದು ಎಂದರು.
ಸಭಾ ಅಧ್ಯಕ್ಷತೆಯನ್ನು ಗುತ್ತಿಗಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಸುಮಿತ್ರ ಮೂಕಮಲೆ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಅಶೋಕ ನೆಕ್ರಾಜೆ, ಗ್ರಾಮ ಪಂಚಾಯತ್ ಸದಸ್ಯ ಜಗದೀಶ ಬಾಕಿಲ, ಗುತ್ತಿಗಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ, ಶಿಕ್ಷಣ ಸಂಯೋಜಕಿ ಶ್ರೀಮತಿ ಧನಲಕ್ಷ್ಮಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಮುತ್ಲಾಜೆ, ಶಾಲಾ ಎಸ್‌ಡಿಎಂಸಿ ಉಪಾಧ್ಯಕ್ಷೆ ಶ್ರೀಮತಿ ಪ್ರಸನ್ನ ಆಮೆ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಲೋಕೇಶ್ವರ, ವಿದ್ಯಾರ್ಥಿ ನಾಯಕ ಗಣರಾಜ ಸೇರಿದಂತೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳಿಯರವರನ್ನು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ವತಿಯಿಂದ ಗೌರವಿಸಲಾಯಿತು. ಅಲ್ಲದೆ ಕ್ರೀಡಾಕೂಟದಲ್ಲಿ ರಾಜ್ಯಮಟ್ಟವನ್ನು ಪ್ರತಿನಿಧಿಸಿದ ವಿದ್ಯಾರ್ಥಿ ವಿವೇಕ್ ಎರ್ದಡ್ಕ ಹಾಗೂ ಜಿಲ್ಲಾ ಮಟ್ಟವನ್ನು ಪ್ರತಿನಿಧಿಸಿದ ಕು.ರಿಜ್ನ ಇವರನ್ನು ಮತ್ತು ಕಬ್ಬಡಿ ತರಬೇತುದಾರರಾದ ವಿನ್ಯಾಸ್ ಕೊಚ್ಚಿ ಹಾಗೂ ಮನೀಶ್ ದೇವಸ್ಯ ಇವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.
ನಂತರ ದಾನಿಗಳು ಸ್ಥಾಪಿಸಿದ ದತ್ತಿನಿಧಿ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಾಲಾ ಶಿಕ್ಷಕಿ ಪೂರ್ಣಿಮಾ ತುಂಬತ್ತಾಜೆ ಅವರು ಶಾಲಾ ವಾರ್ಷಿಕ ವರದಿಯನ್ನು ವಾಚಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಉಮಾವತಿಯವರು ವಂದಿಸಿದರು. ಮಧ್ಯಾಹ್ನದ ನಂತರ ಅಂಗನವಾಡಿ, ಎಲ್‌ಕೆಜಿ, ಯು ಕೆ ಜಿ ಹಾಗೂ ಒಂದರಿಂದ ಏಳನೇ ತರಗತಿಯ ಮಕ್ಕಳು ಶಾಲಾ ಶಿಕ್ಷಕಿಯರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು , ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಶಿಕ್ಷಕಿಯರಾದ ಪೂರ್ಣಿಮಾ,ಚೈತ್ರ., ಯಶೋಧ, ಜೀವಿತ ನಿರೂಪಿಸಿದರು. ಚಿತ್ರ .ವರದಿ. ಹೆಚ್.