ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ವತಿಯಿಂದ ಸಜ್ಜನ ಪ್ರತಿಷ್ಠಾನ ನಿರ್ದೇಶಕ ರಹೀಂ ಬೀಜದಕಟ್ಟೆ ಯವರ ನೇತ್ರತ್ವದಲ್ಲಿ ಸಜ್ಜನ ಕುಟುಂಬ ಸಮ್ಮಿಲನ ಹಾಗೂ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಕಸ್ತೂರಿ ಪ್ರಶಸ್ತಿ ಪುರಸ್ಕೃತ ಸಲೀಂ ಪೆರಂಗೊಡಿ ಯವರಿಗೆ ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮ ಜ.4 ರಂದು ಗೂನಡ್ಕ ಸಜ್ಜನ ಸಭಾಂಗಣದಲ್ಲಿ ನಡೆಯಿತು.
ಸಮಾರಂಭ ಸಜ್ಜನ ಕುಟುಂಬ ಮಿತ್ರರು ಹಿತೈಷಿಗಳು ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಇತ್ತೀಚಿಗೆ ಮದುವೆ ನವ ದಂಪತಿಗಳಿಗೆ ಶುಭ ಹಾರೈಸಿ ಸ್ಮರಣಿಕೆ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಜ್ಜನ ಪ್ರತಿಷ್ಠಾನ ಅಧ್ಯಕ್ಷ ಡಾ.ಉಮ್ಮರ್ ಬೀಜದಕಟ್ಟೆ ವಹಿಸಿದರು.
ಸಜ್ಜನ ಪ್ರತಿಷ್ಠಾನ ನಿರ್ದೇಶಕ ಶರೀಫ್ ಜಟ್ಟಿಪಳ್ಳ.ಸಜ್ಜನ ವ್ಯವಸ್ಥಾಪಕ ಪೈಸಲ್ ಬೀಜದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಸಹ ಭೋಜನ ಏರ್ಪಡಿಸಲಾಗಿತ್ತು.